Breaking News

ಬಿಪಿಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರದ ಪರಿಶೀಲನೆ: ವಿಧಾನಸಭೆಯಲ್ಲಿ ಆಹಾರ ಸಚಿವರ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (BPL) ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ ಪ್ರಸ್ತುತ ಇರುವ ವಾರ್ಷಿಕ ಆದಾಯ ಮಿತಿಯನ್ನು ಹೆಚ್ಚಿಸುವ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಸ್ತುತ ಬಿಪಿಎಲ್ ಕಾರ್ಡ್‌ಗಳಿಗೆ ವಾರ್ಷಿಕ ಆದಾಯ ಮಿತಿ ₹1.20 ಲಕ್ಷ ಇದ್ದು, ಇದನ್ನು ಪರಿಷ್ಕರಿಸುವುದು ವಿಶಾಲವಾದ ಪರಿಣಾಮಗಳನ್ನು ಬೀರುವುದರಿಂದ ಎಲ್ಲಾ ಭಾಗೀದಾರರೊಂದಿಗೆ ಸುದೀರ್ಘ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ರದ್ದಾಗಿರುವ ಬಿಪಿಎಲ್ ಕಾರ್ಡ್‌ಗಳನ್ನು ಪುನಃ ಪರಿಶೀಲಿಸಲು ಇಲಾಖೆಗೆ ಸೂಚನೆ ನೀಡಲಾಗಿದೆ. ನಿಜವಾದ ಅರ್ಹ ಫಲಾನುಭವಿಗಳು ಸೌಲಭ್ಯಗಳಿಂದ ವಂಚಿತರಾಗಬಾರದು ಹಾಗೂ ನಕಲಿ/ಅನರ್ಹ ಕಾರ್ಡ್‌ಗಳನ್ನು ಗುರುತಿಸುವುದು ಇದರ ಉದ್ದೇಶವಾಗಿದೆ.ಪ್ರಸ್ತುತ ಇರುವ ₹1.20 ಲಕ್ಷ ಆದಾಯ ಮಿತಿಯನ್ನು ಪರಿಷ್ಕರಿಸುವ ಪ್ರಕ್ರಿಯೆ ಸರ್ಕಾರದ ಹಂತದಲ್ಲಿದೆ.

ಇದನ್ನೂ ಓದಿ: ಮಂಗಳೂರು ರೈಲ್ವೇ ವಿಲೀನಕ್ಕೆ ಕೇರಳ ತೀವ್ರ ಆಕ್ರೋಶ: ಪ್ರಧಾನಿ ಮೋದಿ, ರೈಲ್ವೇ ಸಚಿವರಿಗೆ ದೂರು ನೀಡಲು ತೀರ್ಮಾನ

ಆನೇಕಲ್ ಶಾಸಕ ಬಿ. ಶಿವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಈಶ್ವರ ಖಂಡ್ರೆ ಅವರು, ರಾಜ್ಯದಲ್ಲಿ ಒಟ್ಟು 20,340 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಈ ಪೈಕಿ 17,208 ಕಾರ್ಯನಿರ್ವಹಿಸುತ್ತಿವೆ. 602 ಘಟಕಗಳು ಸಂಪೂರ್ಣ ನಿಂತುಹೋಗಿದ್ದು, 2,530 ಘಟಕಗಳಿಗೆ ದುರಸ್ತಿ ಅಗತ್ಯವಿದೆ. ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ₹29.50 ಕೋಟಿ ಮೀಸಲಿಟ್ಟಿದ್ದು, ಈಗಾಗಲೇ ₹13 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *