Breaking News

ರಾಹುಲ್ ಗಾಂಧಿ ಭಾರತದಲ್ಲೇ ಇರಲು ಅನರ್ಹ: ಮೈಸೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

ಮೈಸೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಸಂಸ್ಕೃತಿ ಮತ್ತು ಇತಿಹಾಸ ತಿಳಿಯದೆ ಮಾತನಾಡುತ್ತಿದ್ದಾರೆ ಹಾಗೂ ಅವರು ಭಾರತದಲ್ಲೇ ಇರಲು ಅನರ್ಹರು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯ ಪೊಲೀಸ್ ಠಾಣೆಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರ ಇಟ್ಟಿರುವುದನ್ನು ವಿರೋಧಿಸಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಣ್ಣ ಈ ರೀತಿ ತಿರುಗೇಟು ನೀಡಿದರು.

“ವರ್ಷದಲ್ಲಿ 15 ದಿನ ಭಾರತದಲ್ಲಿದ್ದು, ಇನ್ನುಳಿದ 15 ದಿನ ವಿದೇಶದಲ್ಲಿ ಕಳೆಯುವವರಿಗೆ ದೇಶದ ಕಾನೂನು ಮತ್ತು ಸಂಸ್ಕೃತಿಯ ಅರಿವಿಲ್ಲ. ಅಮಿತ್ ಶಾ ಅವರು ದೇಶದ ಗೃಹ ಸಚಿವರು, ಪೊಲೀಸ್ ಠಾಣೆಯಲ್ಲಿ ಅವರ ಫೋಟೋ ಇರುವುದರಲ್ಲಿ ತಪ್ಪೇನಿದೆ?” ಎಂದು ಸೋಮಣ್ಣ ಪ್ರಶ್ನಿಸಿದ್ದಾರೆ.

ಕರ್ನಾಟಕವನ್ನು ಸ್ವರ್ಗ ಮಾಡುತ್ತೇನೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಇನ್ನೂ ಎರಡು ತಿಂಗಳು ಕಾಯೋಣ, ಅವರು ಯಾವ ರೀತಿಯ ಪ್ರಪಂಚ ಸೃಷ್ಟಿಸುತ್ತಾರೆ ಎಂಬುದು ಎಲ್ಲರಿಗೂ ತಿಳಿಯಲಿದೆ” ಎಂದು ಲೇವಡಿ ಮಾಡಿದರು.

ಇದನ್ನೂ ಓದಿ,:ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕೊಡಿಪ್ಪಾಡಿ-ಕುಳ ಘಟಕದ ವತಿಯಿಂದ ಆ.9ರಂದು ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

“ನಾವು ಕಾಂಗ್ರೆಸ್ ನಾಯಕರ ಕಾಲು ಎಳೆಯುತ್ತಿಲ್ಲ, ಅವರ ಪಕ್ಷದ ಒಳಗಿರುವವರೇ ಪರಸ್ಪರ ಕಾಲು ಎಳೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಕೆಲಸ ಮಾಡುವ ಬುದ್ಧಿವಂತರಿಗೆ ಜಾಗವಿಲ್ಲ” ಎಂದು ಆರೋಪಿಸಿದರು. ಈ ಯೋಜನೆಯಿಂದ ಕೇರಳಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಕೇರಳದ ಮುಖ್ಯಮಂತ್ರಿ ಹಾಗೂ ಸಚಿವರು ಇದನ್ನು ಏಕೆ ವಿರೋಧಿಸುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಈ ಯೋಜನೆಯಿಂದ ಕರ್ನಾಟಕಕ್ಕೆ ನ್ಯಾಯಯುತ ಪಾಲು ಸಿಕ್ಕಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಸೋಮಣ್ಣ ಹರ್ಷ ವ್ಯಕ್ತಪಡಿಸಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *