Breaking News

ಧರ್ಮಸ್ಥಳದಲ್ಲಿ ‘ರಾಕಿಂಗ್ ಸ್ಟಾರ್’ ಯಶ್: ಮಂಜುನಾಥ ಸ್ವಾಮಿಯ ದರ್ಶನ ಪಡೆದು ‘ಟಾಕ್ಸಿಕ್’ ಯಶಸ್ಸಿಗೆ ವಿಶೇಷ ಪೂಜೆ

ಧರ್ಮಸ್ಥಳ: ಸ್ಯಾಂಡಲ್‌ವುಡ್ ಹಾಗೂ ರೌಂಡ್‌ ದಿ ಗ್ಲೋಬ್‌ ಭಾರೀ ಸದ್ದು ಮಾಡುತ್ತಿರುವ ‘ರಾಕಿಂಗ್ ಸ್ಟಾರ್’ ಯಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.

ತಮ್ಮ ಮುಂಬರುವ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ಅದ್ಭುತ ಯಶಸ್ಸಿಗಾಗಿ ಪ್ರಾರ್ಥಿಸಿ, ಯಶ್ ಅವರು ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಯಶ್ ಅವರು ಶ್ರೀ ಮಂಜುನಾಥ ಸ್ವಾಮಿಯ ಗರ್ಭಗುಡಿಯ ಸಮೀಪ ನಿಂತು ಸುಮಾರು 10 ನಿಮಿಷಗಳ ಕಾಲ ಸುದೀರ್ಘವಾಗಿ ಪ್ರಾರ್ಥನೆ ಸಲ್ಲಿಸಿದರು.

ಇದನ್ನೂ ಓದಿ: ನಟಿ ನಿಕಿತಾ ರಾವಲ್ ಗೆ ರೆಡ್ ಕಾರ್ಪೆಟ್‌ ಮೇಲೆಯೇ ಲಿಪ್-ಕಿಸ್ ಕೊಟ್ಟ ಅಭಿಮಾನಿ: ವಿಡಿಯೋ ವೈರಲ್

ತಮ್ಮ ಅಭಿನಯದ ‘ಟಾಕ್ಸಿಕ್’ ಸಿನಿಮಾ ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಂಡು ಭಾರಿ ಯಶಸ್ಸು ಕಾಣಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು. ಯಶ್ ಧರ್ಮಸ್ಥಳಕ್ಕೆ ಆಗಮಿಸಿದ ವಿಷಯ ತಿಳಿಯುತ್ತಿದ್ದಂತೆ ಅವರ ನೆಚ್ಚಿನ ನಟನನ್ನು ಕಣ್ಣುಂಬಿಕೊಳ್ಳಲು ದೇವಸ್ಥಾನದ ಆವರಣದಲ್ಲಿ ಅಭಿಮಾನಿಗಳು ಮುಗಿಬಿದ್ದರು.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *