ಮಡಿಕೇರಿ: ಕೊಡಗು ಜಿಲ್ಲೆಯ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಟೆಂಪೊ ಟ್ರಾವೆಲರ್ (TT) ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದಿದೆ. ಈ ಘೋರ ಅಪಘಾತದಲ್ಲಿ ಟಿಟಿ ವಾಹನದಲ್ಲಿದ್ದ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಸುಳ್ಯದಿಂದ 2 ಆಂಬ್ಯುಲೆನ್ಸ್ ಹಾಗೂ ಮಡಿಕೇರಿಯಿಂದ 1 ಆಂಬ್ಯುಲೆನ್ಸ್ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿವೆ.ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಸಹಾಯದಿಂದ ಗಾಯಾಳುಗಳನ್ನು ರಕ್ಷಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ತುರ್ತಾಗಿ ಕರೆದುಕೊಂಡು ಬರಲಾಗುತ್ತಿದೆ.
ಇದನ್ನೂ ಓದಿ; ಹನೂರು ಗುಂಡಿನ ಚಕಮಕಿ: ಹತ್ತಿರದಿಂದಲೇ ಶೂಟ್ ಮಾಡಲಾಗಿತ್ತು; ಅರಣ್ಯ ಇಲಾಖೆ ವಾದಕ್ಕೆ ತಿರುಗುಬಾಣವಾದ ಮರಣೋತ್ತರ ಪರೀಕ್ಷೆ ವರದಿ
ಟಿಟಿ ವಾಹನದಲ್ಲಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಶ್ರಮಿಸಿದ್ದು, ಹೆದ್ದಾರಿ ಸಂಚಾರ ಕೆಲ ಕಾಲ ಅಸ್ತವ್ಯಸ್ತಗೊಂಡಿತ್ತು.

