Breaking News

ರಾಜ್ಯಮಟ್ಟದ ಬ್ಯಾಡ್ಮಿಂಟನ್‌ನಲ್ಲಿ ಪುತ್ತೂರಿನ ಅಂಬಿಕಾ ಕಾಲೇಜಿಗೆ ಪ್ರಥಮ ಸ್ಥಾನ: ರಾಷ್ಟ್ರಮಟ್ಟದ ಸ್ಪರ್ಧೆಗೆ ವಿದ್ಯಾರ್ಥಿನಿಯರು ಆಯ್ಕೆ

ಪುತ್ತೂರು: ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಪುತ್ತೂರಿನ ಸುದಾನ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿನಿಯರ ತಂಡವು ಭರ್ಜರಿ ಜಯಗಳಿಸಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಈ ಗೆಲುವಿನ ಮೂಲಕ ಅಂಬಿಕಾ ವಿದ್ಯಾಲಯದ ಕ್ರೀಡಾಪಟುಗಳು ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಾಧಕರು:

ಅದಿತಿ ಯು. ಎನ್. (ದ್ವಿತೀಯ ಪಿಯುಸಿ ಕಾಮರ್ಸ್)
ಅವನಿ ಯು. ಎನ್. (ದ್ವಿತೀಯ ಪಿಯುಸಿ ಕಾಮರ್ಸ್)
ಸಾನ್ವಿ ರಾಧ ಎಸ್. (ಪ್ರಥಮ ಪಿಯುಸಿ ಸೈನ್ಸ್)

ಅತ್ಯುತ್ತಮ ಕ್ರೀಡಾ ಪ್ರದರ್ಶನ ನೀಡಿದ ಈ ಮೂವರು ವಿದ್ಯಾರ್ಥಿನಿಯರು ಮುಂಬರುವ ಅಕ್ಟೋಬರ್ ತಿಂಗಳಿನಲ್ಲಿ ನವದೆಹಲಿಯಲ್ಲಿ ಆಯೋಜನೆಗೊಳ್ಳಲಿರುವ ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

ಇದನ್ನೂ ಓದಿ: ನೇಪಾಳ ದುರಂತಕ್ಕೂ ಮುನ್ನ ಸಿಕ್ಕಿತ್ತಾ ದೈವಿಕ ಮುನ್ಸೂಚನೆ? ಪಲಾಂಚೋಕ್ ಭಗವತಿ ವಿಗ್ರಹ ಬೆವತ 2 ದಿನದಲ್ಲೇ ಪ್ರಳಯ

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಸಿಬ್ಬಂದಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *