Breaking News

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಸಾಮಾಜಿಕ ಜಾಲತಾಣ, ಪೋಕ್ಸೋ ಹಾಗೂ ಮಾದಕ ವಸ್ತುಗಳ ಜಾಗೃತಿ ಕಾರ್ಯಾಗಾರ

ಬಂಟ್ವಾಳ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಇಂದು(ಆ.31) ವಿದ್ಯಾರ್ಥಿಗಳಿಗಾಗಿ ‘ಸಾಮಾಜಿಕ ಜಾಲತಾಣಗಳ ಬಳಕೆ, ಪೋಕ್ಸೋ ಕಾಯ್ದೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು’ ಮಹತ್ವದ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಪ್ರಣಿತ ಅವರು, ಸಾಮಾಜಿಕ ಜಾಲತಾಣಗಳನ್ನು ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ಬಳಸುವ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗರೂಕರಾಗಿರಬೇಕು. ಯಾವುದೇ ಅಪಾಯಕಾರಿ ಅಥವಾ ಅನುಮಾನಾಸ್ಪದ ಸಂದರ್ಭಗಳು ಎದುರಾದಲ್ಲಿ ತಕ್ಷಣ ಎಚ್ಚೆತ್ತುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಪೊಲೀಸ್ ಕಾನ್ಸ್ಟೇಬಲ್ ಪ್ರಣಿತ ತಿಳಿಸಿದರು. ಮಕ್ಕಳ ರಕ್ಷಣೆಗೆ ಇರುವ ಪೋಕ್ಸೋ (POCSO) ಕಾಯ್ದೆಯ ಮುಖ್ಯ ಉದ್ದೇಶಗಳು ಹಾಗೂ ಪ್ರಸ್ತುತ ಸಮಾಜದಲ್ಲಿ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುರಂತ ಮತ್ತು ದುಷ್ಪರಿಣಾಮಗಳ ಕುರಿತು ವಿವರವಾದ ಮಾಹಿತಿ ನೀಡಲಾಯಿತು.

ಇದನ್ನೂ ಓದಿ: ಮನೆಯಲ್ಲಿ ನೀಡಲಾಗುವ ಸಂಸ್ಕಾರವೇ ಸಂಸ್ಕೃತಿಯಾಗಿ ಸಮಾಜಕ್ಕೆ ಕೊಡುಗೆಯಾಗುತ್ತದೆ: ಡಾ. ಗೀತಾ ಕುಮಾರಿ ಟಿ.

ಅಕ್ಕಪಡೆಯ ಸಿಬ್ಬಂದಿ ಸುಕೇತ ಅವರು ಮಹಿಳೆಯರು ಹಾಗೂ ಹೆಣ್ಣುಮಕ್ಕಳ ರಕ್ಷಣೆಗೆ ಕಾರ್ಯಾಚರಿಸುತ್ತಿರುವ ‘ಅಕ್ಕ ಪಡೆ’ಯ ಕಾರ್ಯವೈಖರಿ ಮತ್ತು ಸೇವೆಯ ಕುರಿತು ವಿವರಣೆ ನೀಡಿದರು. ವೇದಿಕೆಯಲ್ಲಿ ಅಕ್ಕ ಪಡೆಯ ಸಿಬ್ಬಂದಿ ಭವ್ಯ ಉಪಸ್ಥಿತರಿದ್ದರು. ವಿದ್ಯಾಲಯದ ಸಮಾಜಶಾಸ್ತ್ರ ಉಪನ್ಯಾಸಕಿ ದೀಪಿಕಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *