Breaking News

ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ ‘ದೀಪಿಕಾ ಯೋಜನೆ’: 1.5 ಲಕ್ಷ ರೂ. ವಿದ್ಯಾರ್ಥಿವೇತನ ಘೋಷಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ರಾಜ್ಯದ ಹೆಣ್ಣುಮಕ್ಕಳ ಪದವಿ ಶಿಕ್ಷಣದ ಕನಸನ್ನು ನನಸಾಗಿಸುವ ಹಾಗೂ ಅವರ ಉನ್ನತ ವ್ಯಾಸಂಗಕ್ಕೆ ಬೆಂಬಲ ನೀಡುವ ಉದ್ದೇಶದಿಂದ ಕರ್ನಾಟಕ ಕಾಂಗ್ರೆಸ್ ಸರ್ಕಾರವು ‘ದೀಪಿಕಾ ಯೋಜನೆ’ ಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕಾಗಿ ಗರಿಷ್ಠ 1.5 ಲಕ್ಷದವರೆಗೆ ವಿದ್ಯಾರ್ಥಿವೇತನ (Scholarship) ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ.

ವಿದ್ಯಾರ್ಥಿವೇತನದ ಮೊತ್ತ:

ಸಾಮಾನ್ಯ ಪದವಿ ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ₹೩೦,೦೦೦ ವಿದ್ಯಾರ್ಥಿವೇತನ ದೊರೆಯಲಿದೆ.

5 ವರ್ಷಗಳ ವೈದ್ಯಕೀಯ (Medical) ಕೋರ್ಸ್ ಅಭ್ಯಾಸ ಮಾಡುವ ವಿದ್ಯಾರ್ಥಿನಿಯರಿಗೆ ಒಟ್ಟು 1.5 ಲಕ್ಷ ನೇರ ನೆರವು ಸಿಗಲಿದೆ.

ಅರ್ಹತೆಯ ಮಾನದಂಡಗಳು:

ವಿದ್ಯಾರ್ಥಿನಿಯರು ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಹಾಗೂ ಸರ್ಕಾರಿ ಪದವಿಪೂರ್ವ (PUC) ಕಾಲೇಜಿನಲ್ಲಿ ಪಿಯುಸಿ ಪೂರ್ಣಗೊಳಿಸಿರಬೇಕು.

“ಉನ್ನತ ಶಿಕ್ಷಣದ ಮೂಲಕ ಮಹಿಳಾ ಸಬಲೀಕರಣ ಸಾಧಿಸುವುದೇ ನಮ್ಮ ಸರ್ಕಾರದ ಮುಖ್ಯ ಧ್ಯೇಯವಾಗಿದೆ” ಎಂದು ಸರ್ಕಾರ ತಿಳಿಸಿದೆ. ಹೆಚ್ಚಿನ ಮಾಹಿತಿಗೆ https://dce.karnataka.gov.in ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *