Breaking News

ಮಂಗಳೂರು: ಅಷ್ಟಮಿ ಭಜನಾ ಸೇವೆ ಮಾಡುತ್ತಿದ್ದಾಗ ತೀವ್ರ ಹೃದಯಾಘಾತ; 38 ವರ್ಷದ ಯುವಕ ದಾರುಣ ಅಂತ್ಯ

ಮಂಗಳೂರು : ಕೃಷ್ಣ ಜನ್ಮಾಷ್ಟಮಿ ಸಂಭ್ರಮದ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ತೋಕೂರು ಗ್ರಾಮದಲ್ಲಿ ಭೀಕರ ಹಾಗೂ ಶೋಕದಾಯಕ ಘಟನೆಯೊಂದು ನಡೆದಿದೆ. ಭಜನಾ ಸೇವೆಯಲ್ಲಿ ನಿರತರಾಗಿದ್ದ 38 ವರ್ಷದ ಯುವಕನೊಬ್ಬ ಹೃದಯಾಘಾತದಿಂದ (Heart Attack) ಸ್ಥಳದಲ್ಲೇ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ತಡರಾತ್ರಿ ಈ ದಾರುಣ ಘಟನೆ ಸಂಭವಿಸಿದೆ.

ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (೩೮) ಎಂದು ಗುರುತಿಸಲಾಗಿದೆ. ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಅಷ್ಟಮಿ ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಭಜನಾ ಕಾರ್ಯಕ್ರಮದಲ್ಲಿ ಶ್ರೀನಾಥ್ ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಭಜನೆ ಗಾಯನ ಮಾಡುತ್ತಿದ್ದರು.

ಇದನ್ನೂ ಓದಿ: ಸವಣಾಲು ಮತ್ತು ಅಚ್ಲಾಡಿಯಲ್ಲಿ ಬೋನಿಗೆ ಬಿದ್ದ ಚಿರತೆಗಳು: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಶ್ರೀನಾಥ್ ಶೆಟ್ಟಿಗಾರ್ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದರು. ಅಷ್ಟಮಿ ಹಬ್ಬ ಹಾಗೂ ಊರಿನ ದೇವಸ್ಥಾನದ ಕಾರ್ಯಕ್ರಮಗಳಿಗಾಗಿ ಇತ್ತೀಚೆಗಷ್ಟೇ ಊರಿಗೆ ಆಗಮಿಸಿದ್ದರು. ಊರಿನ ಸ್ಥಳೀಯ ಸಾಮಾಜಿಕ ಹಾಗೂ ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉದಯೋನ್ಮುಖ ಯುವಕನ ಅಕಾಲಿಕ ಮರಣವು ತೋಕೂರು ಗ್ರಾಮಸ್ಥರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *