ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನೋರ್ವನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜವಾದ್ (32 ವರ್ಷ), ಸಾಹಿದ್ (32 ವರ್ಷ) ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ (47 ವರ್ಷ) ಎಂದು ಗುರುತಿಸಲಾಗಿದೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕನಿಗೆ ೨೦೨೬ರ ಫೆಬ್ರವರಿಯಿಂದ ಆಗಸ್ಟ್ ಅವಧಿಯಲ್ಲಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಲಾಗಿತ್ತು. ಈ ಕುರಿತು ಸಂತ್ರಸ್ತ ಬಾಲಕ ಹಾಗೂ ಆತನ ಕುಟುಂಬದವರು ಸೆಪ್ಟೆಂಬರ್ ೪ ರಂದು ವಿಟ್ಲ ಪೊಲೀಸ್ ಠಾಣೆಗೆ ಆಗಮಿಸಿ ಅಧಿಕೃತ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ತಕ್ಷಣ ಜಾಗೃತಗೊಂಡ ಪೊಲೀಸರು ಪೋಕ್ಸೋ ಕಾಯ್ದೆಯಡಿ Sexual Offences Act) ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು.ಕರಣದ ಜಾಡು ಹಿಡಿದ ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರೂ ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದರು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

