Breaking News

ಸೌಜನ್ಯ ಪ್ರಕರಣ ಮರುತನಿಖೆ: ‘ಸರ್ಕಾರ ರಚಿಸಿರುವ SIT ತಂಡದ ಬಗ್ಗೆ ಅಸಮಾಧಾನವಿದೆ’: ಸೌಜನ್ಯ ತಾಯಿ ಕುಸುಮಾವತಿ

ಮಂಗಳೂರು: ಧರ್ಮಸ್ಥಳದ ಕುಮಾರಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (SIT) ಕುರಿತು ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕುಸುಮಾವತಿ ಅವರ ಹೆಸರಿನಲ್ಲಿ ಮಾಧ್ಯಮಗಳಿಗೆ ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಲಾಗಿದ್ದು, ಸರ್ಕಾರ ರಚಿಸಿರುವ ತನಿಖಾ ತಂಡದ ಕುರಿತು ತಮ್ಮ ಅತೃಪ್ತಿಯನ್ನು ಹೊರಹಾಕಿದ್ದಾರೆ.

“ನನ್ನ ಮಗಳು ಧರ್ಮಸ್ಥಳ ಸೌಜನ್ಯಳಿಗಾದ ದುರಂತದ ಮರುತನಿಖೆಗೆ ಆದೇಶ ನೀಡಿರುವ ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ (Supreme Court) ನಾವು ಎಂದಿಗೂ ಆಭಾರಿಯಾಗಿರುತ್ತೇವೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. “ಮರುತನಿಖೆ ನಡೆಸಿ ನ್ಯಾಯ ಒದಗಿಸಲು ರಾಜ್ಯ ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡದ (SIT) ಬಗ್ಗೆ ನಮಗೆ ತೀವ್ರ ಅಸಮಾಧಾನವಿದೆ” ಎಂದು ಕುಸುಮಾವತಿ ಅವರು ತಮ್ಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದಿಗ್ಗಜ ನಟ ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗರಿ

ಸೌಜನ್ಯ ಕುಟುಂಬಸ್ಥರು ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ್ದರೂ, ಪ್ರಸ್ತುತ ಸರ್ಕಾರ ಜಾರಿಗೆ ತಂದಿರುವ ಎಸ್‌ಐಟಿ ತಂಡದ ಕಾರ್ಯವೈಖರಿ ಮತ್ತು ಸ್ವರೂಪದ ಕುರಿತು ಅಸಮಾಧಾನ ಹೊಂದಿರುವುದು ಈ ಪ್ರಕರಣಕ್ಕೆ ಮತ್ತೊಂದು ಹೊಸ ತಿರುವು ನೀಡಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್‌ ಮಾಡಿ