ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮಧ್ಯಾಹ್ನ ಉಪಹಾರ ಯೋಜನೆ (PM POSHAN) ಹಾಗೂ ಕ್ಷೀರಭಾಗ್ಯ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದೆ. 2026-27ನೇ ಸಾಲಿನ ಮೂರನೇ ತ್ರೈಮಾಸಿಕ ಅವಧಿಯ (Q3) ವೇತನ ಪಾವತಿಗಾಗಿ ಒಟ್ಟು ₹1,147.48 ಲಕ್ಷಗಳ (₹11.47 ಕೋಟಿ) ಅನುದಾನವನ್ನು ಬಿಡುಗಡೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಮಟ್ಟದಲ್ಲಿ ಈ ಎರಡು ಪ್ರಮುಖ ಯೋಜನೆಗಳ ಉಸ್ತುವಾರಿ ವಹಿಸಿಕೊಂಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವೇತನ ಪಾವತಿಗೆ ಈ ಮೊತ್ತವನ್ನು ಕಾಯ್ದಿರಿಸಲಾಗಿದೆ.
ಇದನ್ನೂ ಓದಿ: ಇನ್ಮುಂದೆ ಉಪ್ಪಿನ ಪ್ಯಾಕೆಟ್ ಮೇಲೂ ‘ಸಿಗರೇಟ್ ಮಾದರಿ’ ವಾರ್ನಿಂಗ್ ಲೇಬಲ್
ವಾರ್ಷಿಕ 45.89 ಕೋಟಿ ರೂ. ಬಜೆಟ್‌ನಲ್ಲಿ 3ನೇ ಕಂತು ಜಮಾ:
ಇಲಾಖೆಯ ಮಾಹಿತಿಯಂತೆ, 2026-27ನೇ ಹಣಕಾಸು ವರ್ಷದಲ್ಲಿ ಈ ಯೋಜನೆಗಳ ಸಿಬ್ಬಂದಿ ವೇತನಕ್ಕಾಗಿ ಒಟ್ಟು ₹4,589.93 ಲಕ್ಷ (₹45.89 ಕೋಟಿ) ವಾರ್ಷಿಕ ಅನುದಾನವನ್ನು ನಿಗದಿಪಡಿಸಲಾಗಿದೆ. ಬಿಡುಗಡೆಯಾಗಿರುವ 3ನೇ ತ್ರೈಮಾಸಿಕದ ₹1,147.48 ಲಕ್ಷ ಹಣವನ್ನು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (CEO) ಹಾಗೂ ಮುಖ್ಯ ಲೆಕ್ಕಾಧಿಕಾರಿಗಳಿಗೆ (CAO) ತಕ್ಷಣವೇ ಪಾವತಿಸಲು ನಿರ್ದೇಶಿಸಿ ಬಿಡುಗಡೆ ಮಾಡಲಾಗಿದೆ. ಈ ಅನುದಾನ ಬಿಡುಗಡೆಯಿಂದಾಗಿ ರಾಜ್ಯಾದ್ಯಂತ ಶಾಲಾ ಹಂತದಲ್ಲಿ ಪೌಷ್ಟಿಕ ಆಹಾರ ಮತ್ತು ಹಾಲು ವಿತರಣೆ ಯೋಜನೆಯನ್ನು ಸುಗಮವಾಗಿ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಸಮಯಕ್ಕೆ ಸರಿಯಾಗಿ ವೇತನ ಸಿಗಲಿದ್ದು, ಕೆಲಸಕ್ಕೆ ಹೆಚ್ಚಿನ ಚೈತನ್ಯ ಬರಲಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

