ಫ್ಲೈದುಬೈ ಕಾಕ್‌ಪಿಟ್ ದಾಳಿ ಪ್ರಕರಣ: ಸಂಚಿನ ಹಿಂದೆ ಇರಾನ್ ಕೈವಾಡ; ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಗಂಭೀರ ಆರೋಪ

ವಾಷಿಂಗ್ಟನ್ : ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ‘ಫ್ಲೈದುಬೈ’ (Flydubai – FZ1073) ವಿಮಾನದ ಕಾಕ್‌ಪಿಟ್‌ನಲ್ಲಿ ನಡೆದ ಭೀಕರ ದಾಳಿ ಹಾಗೂ ವಿಮಾನ ಪತನಗೊಳಿಸುವ ಹುನ್ನಾರದ ಹಿಂದೆ ಇರಾನ್ ಹಸ್ತವಿದೆ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಗಂಭೀರ ಆರೋಪ ಮಾಡಿದ್ದಾರೆ.

ಬೋಯಿಂಗ್ 737 ಮ್ಯಾಕ್ಸ್ ವಿಮಾನದಲ್ಲಿ ನಡೆದಿರುವ ಈ ಆಘಾತಕಾರಿ ಘಟನೆಯ ಬಗ್ಗೆ ಆರಂಭದಿಂದಲೂ ಇರಾನ್ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ಟ್ರಂಪ್, ಇದೀಗ ಮತ್ತೊಮ್ಮೆ ಇರಾನ್ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದು, ತನಿಖೆಯಲ್ಲಿ ಇರಾನ್‌ನ ಪಾತ್ರ ಖಚಿತವಾದರೆ ಸುಮ್ಮನೆ ಕೂರುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಘಟನೆಯ ಹಿನ್ನೆಲೆ ಹಾಗೂ ಗಂಭೀರ ಆರೋಪ:

ದುಬೈನಿಂದ ಟೆಲ್ ಅವೀವ್‌ಗೆ ಪ್ರಯಾಣಿಸುತ್ತಿದ್ದ ಫ್ಲೈದುಬೈ ಬೋಯಿಂಗ್ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ-ಪೈಲಟ್, ಭಾರತೀಯ ಮೂಲದ ಮುಖ್ಯ ಪೈಲಟ್ ಸ್ಮಿತ್ ಮಚ್ಚಾರ್ (Smit Machchhar) ಅವರ ಮೇಲೆ ದಾಳಿ ನಡೆಸಿ, ವಿಮಾನವನ್ನು ಪತನಗೊಳಿಸಲು ಯತ್ನಿಸಿದ್ದ. ಆದರೆ ಪೈಲಟ್ ಹಾಗೂ ಪ್ರಯಾಣಿಕರ ಸಮಯಪ್ರಜ್ಞೆಯಿಂದಾಗಿ ದೊಡ್ಡ ದುರಂತ ತಪ್ಪಿತ್ತು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್, “ಈ ವಿಕೃತ ಸಂಚಿನ ಹಿಂದೆ ಇರಾನ್ ಕೈವಾಡವಿದೆ ಎಂದು ನಾನು ವೈಯಕ್ತಿಕವಾಗಿ ಬಲವಾಗಿ ನಂಬುತ್ತೇನೆ. ವಿಮಾನವನ್ನು ಧ್ವಂಸಗೊಳಿಸಲು ಇರಾನ್ ಸಂಚು ರೂಪಿಸಿತ್ತು” ಎಂದು ಆರೋಪಿಸಿದ್ದಾರೆ.

“ಒಂದು ವೇಳೆ ಈ ಪ್ರಕರಣದಲ್ಲಿ ಇರಾನ್‌ನ ಪಾತ್ರ ಇರುವುದು ಸಾಬೀತಾದರೆ, ಅವರು ಅತ್ಯಂತ ಕಠಿಣ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಅಮೆರಿಕ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಿದೆ” ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ವಿಧಾನಸೌಧದಲ್ಲಿ ‘ಉರ್ದು ಹಬ್ಬ’ ಆಚರಣೆಗೆ ಸರ್ಕಾರದ ನಿರ್ಧಾರ: ವೋಟ್‌ಬ್ಯಾಂಕ್ ರಾಜಕಾರಣ ಎಂದು ಬಿಜೆಪಿ ಆಕ್ರೋಶ

ಸಾರ್ವತ್ರಿಕ ತನಿಖೆ ಹಾಗೂ ಅಂತರರಾಷ್ಟ್ರೀಯ ಮಟ್ಟದ ಬೆಳವಣಿಗೆ:

ಘಟನೆಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ, ಯುಎಇ, ಇಸ್ರೇಲ್ ಹಾಗೂ ಅಮೆರಿಕದ ತನಿಖಾ ಸಂಸ್ಥೆಗಳು ಜಂಟಿಯಾಗಿ ತನಿಖೆ ನಡೆಸುತ್ತಿವೆ. ಭಯೋತ್ಪಾದನಾ ಕೋನ ಹಾಗೂ ಸಂಚಿನ ಹಿಂದಿರುವ ಶಕ್ತಿಗಳ ಬಗ್ಗೆ ತನಿಖೆ ತೀವ್ರಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ದೊಡ್ಡ ರಾಜಕೀಯ ಮತ್ತು ರಾಜತಾಂತ್ರಿಕ ಸಂಚಲನಕ್ಕೆ ಕಾರಣವಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *