ಮಂಗಳೂರು: ದಸರಾ ರಜೆ ಹಾಗೂ ಹಬ್ಬದ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ವಿರೋಧಿಸಿ ಮಂಗಳೂರಿನಲ್ಲಿ ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ವೇಳೆ ಪೊಲೀಸರು ಅಮಾನವೀಯವಾಗಿ ವರ್ತಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ಪುರುಷ ಪೊಲೀಸರನ್ನು ಬಳಸಿ ಮಹಿಳಾ ವಿದ್ಯಾರ್ಥಿನಿಯರನ್ನು ತಳ್ಳಿರುವ ಘಟನೆ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಎಕ್ಸ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
“ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿಚಾರ್ಜ್ ಹಾಗೂ ದಾಳಿ ನಡೆಸಲು ಆದೇಶ ನೀಡಿದವರು ಯಾರು?” ಎಂದು ವಿದ್ಯಾರ್ಥಿ ಸಂಘಟನೆಗಳು ಹಾಗೂ ಸಾರ್ವಜನಿಕರು ತೀವ್ರವಾಗಿ ಪ್ರಶ್ನಿಸಿದ್ದಾರೆ. ಕರ್ತವ್ಯದ ಹೆಸರಿನಲ್ಲಿ ಮಹಿಳಾ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸ್ ಅಧಿಕಾರಿಗಳು ನೂಕಿ, ಅಸಭ್ಯ ರೀತಿಯಲ್ಲಿ ವರ್ತಿಸಲು ಅವಕಾಶ ನೀಡಿದವರು ಯಾರು ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ತು ಜಯ: ದಸರಾ ಹಬ್ಬದ ಹಿನ್ನೆಲೆ ಸೈಂಟ್ ಆಗ್ನೆಸ್ ಕಾಲೇಜು ಪರೀಕ್ಷೆಗಳು ಭಾಗಶಃ ಮುಂದೂಡಿಕೆ
ಇಲ್ಲಿದೆ ನೋಡಿ ಎಕ್ಸ್ ಪೋಸ್ಟ್:
ಮಂಗಳೂರಿನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಹಲ್ಲೆ ಮಾಡಲು ಪೊಲೀಸರಿಗೆ ಆದೇಶ ನೀಡಿದವರು ಯಾರು? ವಿದ್ಯಾರ್ಥಿನಿಯರನ್ನು ತಳ್ಳಲು ಪುರುಷ ಪೊಲೀಸರಿಗೆ ಅವಕಾಶ ನೀಡಿದ್ದು ಯಾರು? ವಿದ್ಯಾರ್ಥಿಗಳ ಜೊತೆಗೆ ಅಮಾನವೀಯವಾಗಿ ವರ್ತಿಸಿದ್ದು ಮಾತ್ರವಲ್ಲದೆ ಭಾರತ್ ಮಾತಾಕೀ ಜೈ ಎಂದ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದಾರೆ. https://t.co/epwy2UIFYD
— Kota Shrinivas Poojari (@KotasBJP) October 12, 2026
ವಿದ್ಯಾರ್ಥಿಗಳೊಂದಿಗೆ ಅಮಾನವೀಯವಾಗಿ ವರ್ತಿಸುವುದರ ಜೊತೆಗೆ, “ಭಾರತ್ ಮಾತಾ ಕೀ ಜೈ” (Bharat Mata Ki Jai) ಎಂದು ಘೋಷಣೆ ಕೂಗಿದ ವಿದ್ಯಾರ್ಥಿಯೊಬ್ಬನ ಮೇಲೂ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಗಂಭೀರ ಆರೋಪಗಳು ಕೇಳಿ ಬಂದಿದೆ. ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಬಲಪ್ರಯೋಗ ಮಾಡಿರುವುದು ಹಾಗೂ ಮಾನವೀಯತೆ ಮರೆತು ವರ್ತಿಸಿರುವ ಕುರಿತು ಸ್ಥಳೀಯವಾಗಿ ಮತ್ತು ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

