ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಅವರು ಇಂದು ಬೆಂಗಳೂರಿನ ರಾಜಭವನದಲ್ಲಿ (ಲೋಕಭವನ) ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ನೂತನ ರಾಜ್ಯಪಾಲರಿಗೆ ಸಂವಿಧಾನ ಬದ್ಧವಾಗಿ ಪ್ರಮಾಣ ವಚನ ಬೋಧಿಸಿದರು.

 ರಾಜ್ಯದ ನೂತನ ರಾಜ್ಯಪಾಲೆಯಾಗಿ ನೇಮಕಗೊಂಡಿರುವ ಡಾ. ಸುಧಾ ಯಾದವ್ ಅವರು ಇಂದು ರಾಜಭವನದಲ್ಲಿ ನಡೆದ ಸರಳ ಹಾಗೂ ಅರ್ಥಪೂರ್ಣ ಸಮಾರಂಭದಲ್ಲಿ ಅಧಿಕಾರವನ್ನು ಸ್ವೀಕರಿಸಿದರು. ಈ ಮಹತ್ವದ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ಹಿರಿಯ ರಾಜಕೀಯ ನಾಯಕರು ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರDಳು ಭಾಗವಹಿಸಿ ನೂತನ ರಾಜ್ಯಪಾಲರಿಗೆ ಶುಭ ಹಾರೈಸಿದರು. ಸೈನಿಕ ಸ್ಮಾರಕಕ್ಕೆ ನಮನ: ರಾಜ್ಯಪಾಲೆಯಾಗಿ ಅಧಿಕಾರ ಸ್ವೀಕರಿಸುವ ಮುನ್ನ ಇಂದು ಬೆಳಿಗ್ಗೆ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಭೇಟಿ ನೀಡಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರಿಗೆ ಡಾ. ಸುಧಾ ಯಾದವ್ ಅವರು ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದ್ದರು ಎಂಬುದು ಗಮನಾರ್ಹ.