ದೆಹಲಿ: ಭಾರತೀಯ ಜನತಾ ಪಾರ್ಟಿಯ (BJP) ಹಿರಿಯ ನಾಯಕ ಹಾಗೂ ದೇಶದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (98) ಅವರು ಅನಾರೋಗ್ಯದ ಕಾರಣದಿಂದ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆ ಸೋಂಕು (Chest Infection) ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
98 ವರ್ಷ ವಯಸ್ಸಿನ ಎಲ್.ಕೆ. ಅಡ್ವಾಣಿ ಅವರಿಗೆ ವಯೋಸಹಜ ಆರೋಗ್ಯ ಸಮಸ್ಯೆಗಳಿದ್ದು, ಎದೆ ಸೋಂಕು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬದವರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಹಿರಿಯ ವೈದ್ಯರ ವಿಶೇಷ ತಂಡ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದೆ.
ಇದನ್ನೂ ಓದಿ: CJP ಪ್ರತಿಭಟನೆಯಿಂದ ದೂರವಿರಲು ಮುಸ್ಲಿಂ ಸಮುದಾಯಕ್ಕೆ ಧರ್ಮಗುರುಗಳ ಕರೆ
ಈ ವರ್ಷದ ಮೇ ತಿಂಗಳಲ್ಲಿಯೂ ಸಹ ವಯೋಸಹಜ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದರಿಂದ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

