ದೆಹಲಿಯ ಸಂಸತ್ ಭವನದ ನಾರ್ತ್ ಬ್ಲಾಕ್ ಕಟ್ಟಡದಲ್ಲಿ ಇಂದು ಬೆಳಗ್ಗೆ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ಕೆಲಕಾಲ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಸಂಸತ್ ಭವನದಲ್ಲಿ ನವೀಕರಣ ಕಾಮಗಾರಿ (Renovation Work) ನಡೆಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವೆಲ್ಡಿಂಗ್ ಕೆಲಸದ ವೇಳೆ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದ ಕಿಡಿ ಹಾರಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಟ್ಟಡದ ಸುತ್ತಲೂ ಹಾಗೂ ಆಕಾಶದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿತು. ಇದರಿಂದಾಗಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡು ಅಲ್ಲಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ತೀವ್ರ ಭೀತಿ ಮೂಡಿಸಿತ್ತು. ಘಟನೆಯ ಸುಳಿವು ಸಿಗುತ್ತಿದ್ದಂತೆ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆರು (6) ಅಗ್ನಿಶಾಮಕ ವಾಹನಗಳು ಧಾವಿಸಿ ಬಂದವು. ಅಗ್ನಿಶಾಮಕ ಸಿಬ್ಬಂದಿಗಳು ಸತತ ಶ್ರಮ ವಹಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಕೇಸ್ಗೆ ಬಿಗ್ ಟ್ವಿಸ್ಟ್: ದೆಹಲಿಯಲ್ಲಿ ರಿತೇಶ್ನನ್ನು ಬಂಧಿಸಿದ CCB
ಅದೃಷ್ಟವಶಾತ್ ಈ ಅಗ್ನಿ ಅವಘಡದಿಂದ ಯಾವುದೇ ದೊಡ್ಡ ಪ್ರಮಾಣದ ಆಸ್ತಿ ಹಾನಿಯಾಗಲಿ ಅಥವಾ ಪ್ರಾಣಾಪಾಯವಾಗಲಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಸಂಸತ್ ಭವನದಂತಹ ಅತ್ಯಂತ ಭದ್ರತಾ ವಲಯದಲ್ಲಿ ಇಂತಹ ಕಟ್ಟಡ ನವೀಕರಣ ಕಾಮಗಾರಿಗಳನ್ನು ಕೈಗೊಳ್ಳುವಾಗ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ತೋರಿಸಿಕೊಟ್ಟಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

