Breaking News

PMSYM: ಎರಡು ತಿಂಗಳ ವಿಶೇಷ ನೋಂದಣಿ ಅಭಿಯಾನ ಪ್ರಾರಂಭ

ಮಂಗಳೂರು : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್‌ಧನ್ (PMSYM) ಯೋಜನೆ ಹಾಗೂ ಎನ್‌ಪಿಎಸ್ ಟ್ರೇಡರ್ಸ್ ಯೋಜನೆಯ ಅಡಿಯಲ್ಲಿ ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಮತ್ತು ಸ್ವಯಂ ಉದ್ಯೋಗಿಗಳನ್ನು ನೋಂದಾಯಿಸಿಕೊಳ್ಳಲು ಜನವರಿ 15ರಿಂದ ಮಾರ್ಚ್ 15ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

18ರಿಂದ 40 ವರ್ಷ ವಯಸ್ಸಿನೊಳಗಿನ ಅಸಂಘಟಿತ ವಲಯದ ಕಾರ್ಮಿಕರು ಈ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಬಹುದು. ಫಲಾನುಭವಿಯ ವಯಸ್ಸಿನ ಆಧಾರದ ಮೇಲೆ ತಿಂಗಳಿಗೆ ರೂ.55ರಿಂದ ರೂ.200ರವರೆಗೆ ಕೊಡುಗೆ ನೀಡಬೇಕು. ಇದಕ್ಕೆ ಸಮಾನ ಮೊತ್ತವನ್ನು ಕೇಂದ್ರ ಸರ್ಕಾರವೂ ಕೊಡುಗೆಯಾಗಿ ನೀಡಿ, ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತದೆ. 60 ವರ್ಷ ವಯಸ್ಸು ತಲುಪಿದ ನಂತರ ಫಲಾನುಭವಿಗಳಿಗೆ ತಿಂಗಳಿಗೆ ರೂ.3,000 ಪಿಂಚಣಿ ದೊರೆಯಲಿದೆ.

Advertisement

ಈ ಯೋಜನೆಯ ಅಡಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ಕಾರ್ಮಿಕರು, ಸ್ವಸಹಾಯ ಸಂಘ (SHG) ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಧ್ಯಾಹ್ನದ ಬಿಸಿಯೂಟ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಬೀದಿ ವ್ಯಾಪಾರಿಗಳು, ಗೃಹ ಕೆಲಸಗಾರರು, ಮೀನುಗಾರರು ಹಾಗೂ ಇತರೆ ಅಸಂಘಟಿತ ವಲಯದ ಕಾರ್ಮಿಕರು ಮತ್ತು ವ್ಯಾಪಾರಿಗಳು ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಿಗೆ (CSC) ಭೇಟಿ ನೀಡಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಮತ್ತು ಮೊದಲ ತಿಂಗಳ ಕೊಡುಗೆಯೊಂದಿಗೆ ನೋಂದಣಿ ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸಂಬಂಧಿತ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ : ಇಬ್ಬರು ಯುವಕರೊಂದಿಗೆ ಸಿಕ್ಕಿಬಿದ್ದ ಪತ್ನಿಯ ಕೊಲೆ ಮಾಡಿ ಠಾಣೆಗೆ ಅಳುತ್ತಾ ಬಂದ ಪತಿ

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು