ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ; ನಾಲ್ವರು ಅಪರಾಧಿಗಳಿಗೆ 7 ವರ್ಷ ಜೈಲು

kateel-traffic-woman-obstructs-police-case-bajpe

ಬಂಟ್ವಾಳ :ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲೀಕರೊಬ್ಬರ ಮೇಲೆ ಕತ್ತಿಯಿಂದ ಭೀಕರ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು ₹88,000 ದಂಡ ವಿಧಿಸಿ ತೀರ್ಪು ನೀಡಿದೆ.

ಘಟನೆಯ ಹಿನ್ನೆಲೆ:

2020ರ ಆಗಸ್ಟ್ 28ರಂದು ಸಂಜೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಘಟನೆ ನಡೆದಿತ್ತು. ಸ್ಟುಡಿಯೋ ಮಾಲೀಕರಾದ ದಿನೇಶ್ ಅವರ ಸ್ಟುಡಿಯೋಗೆ ನುಗ್ಗಿದ್ದ ನಾಲ್ವರು ಆರೋಪಿಗಳು, ಪೂರ್ವದ್ವೇಷದ ಹಿನ್ನೆಲೆಯಲ್ಲಿ ಕತ್ತಿಯಿಂದ ತೀವ್ರ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದರು. ಈ ಭೀಕರ ಕೃತ್ಯದ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ (ಅ.ಕ್ರ. 103/2020) ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಬಂಟ್ವಾಳ: 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾಂಟೆಡ್ ಆರೋಪಿ ಬಂಧನ

 ತನಿಖೆ ಮತ್ತು ನ್ಯಾಯಾಲಯದ ತೀರ್ಪು:

ಪ್ರಕರಣದ ಸುದೀರ್ಘ ತನಿಖೆ ನಡೆಸಿದ್ದ ಅಂದಿನ ಉಪನಿರೀಕ್ಷಕ (PSI) ಪ್ರಸನ್ನ ಎಂ.ಎಸ್. ಅವರು ಆರೋಪಿಗಳಾದ ಮೊಹಮ್ಮದ್ ಸೈಫುದ್ದೀನ್, ಮೊಹಮ್ಮದ್ ಅರ್ಷಾದ್, ಅಬ್ದುಲ್ ರೆಹಮಾನ್ (ಮುನ್ನಿ) ಮತ್ತು ಮೊಹಮ್ಮದ್ ಸವಾದ್ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಆರೋಪಿಗಳ ಮೇಲಿನ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಅಕ್ಟೋಬರ್ 28ರಂದು ತೀರ್ಪು ಪ್ರಕಟಿಸಿದ್ದು, ಶಿಕ್ಷೆ ವಿಧಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯಕ್ ಅವರು ವಾದ ಮಂಡಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ