ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ, ವಿಟ್ಠಲ್ ಗೌಡ ವಿರುದ್ಧ ಎಸ್ಐಟಿಗೆ ದೂರು

ಮಂಗಳೂರು: ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಡಿಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (SIT) ಹೈಕೋರ್ಟ್ ವಕೀಲ ಅಮೃತೇಶ್ ಎಸ್. ಅವರು ಮಹತ್ವದ ದೂರು ಸಲ್ಲಿಸಿದ್ದಾರೆ. ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ವಿಟ್ಠಲ ಗೌಡ ಅವರ ವಿರುದ್ಧ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

ಪ್ರಕರಣದಲ್ಲಿ ಸಂತೋಷ್ ರಾವ್ ಬಿಡುಗಡೆಯಾಗಲು ಅನುಕೂಲ ಮಾಡಿಕೊಡಲಾಗಿದೆ. ಸಾರ್ವಜನಿಕ ಅಭಿಯೋಜಕರು (Public Prosecutors), ಗೌರವಾನ್ವಿತ ನ್ಯಾಯಾಧೀಶರು ಹಾಗೂ ಪ್ರಕರಣದ ಪರ-ವಿರೋಧ ವಾದ ಮಂಡಿಸಿದ ವಕೀಲರಿಗೆ ಭಾರಿ ಪ್ರಮಾಣದ ಹಣ ಪಾವತಿಸಲಾಗಿದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಮತ್ತು ವಿಟ್ಠಲ ಗೌಡ ಸಾರ್ವಜನಿಕವಾಗಿ ಬಹಿರಂಗ ಹೇಳಿಕೆ ನೀಡಿದ್ದಾರೆ.

Advertisement

ಇದನ್ನೂ ಓದಿ: ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 14 ವರ್ಷಗಳ ಹಳೆಯ ‘ಸ್ವಾಬ್ ಮಾದರಿ’ ಮರುಪರೀಕ್ಷೆಗೆ

ನ್ಯಾಯಾಂಗ ವ್ಯವಸ್ಥೆ, ನ್ಯಾಯಾಧೀಶರು ಹಾಗೂ ವಕೀಲರ ನಂಬಿಕೆಗೆ ಧಕ್ಕೆ ತರುವ ರೀತಿಯಲ್ಲಿ ಇಂತಹ ಗಂಭೀರ ಆರೋಪಗಳನ್ನು ಮಾಡಿ ಸಾರ್ವಜನಿಕರನ್ನು ದಿಕ್ಕು ತಪ್ಪಿಸಲಾಗುತ್ತಿದೆ. ಆದ್ದರಿಂದ ಈ ಹೇಳಿಕೆಗಳ ಸತ್ಯಾಸತ್ಯತೆ ಹಾಗೂ ಅವರ ವಿರುದ್ಧ ಎಸ್ಐಟಿ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು ಎಂದು ವಕೀಲ ಅಮೃತೇಶ್ ಆಗ್ರಹಿಸಿದ್ದಾರೆ.

Advertisement

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Advertisement