ಪೆಟ್ರೋಲ್, ಡಿಸೆಲ್, ಅಡುಗೆ ಅನಿಲದ ಬೆಲೆ ಏರಿಕೆ ಮಾಡಿದ ಕೇಂದ್ರ ಸರಕಾರ ಬಡವನ ಹೊಟ್ಟೆಗೆ ತುಳಿಯುವ ಕೆಲಸ ಮಾಡಿದೆ: ಶಾಸಕ ಅಶೋಕ್ ರೈ

ಪುತ್ತೂರು: ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ ಅಧಿಜಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಜಾರಿಯಾದ ಪಂಚ ಗ್ಯಾರಂಟಿ ಯೋಜನೆ ಯಿಂದ ಬಡವರು,ಮಧ್ಯಮ ವರ್ಗದವರು ನೆಮ್ಮದಿಯಿಂದ ಇದ್ದಾರೆ, ಪುತ್ತೂರಿನಲ್ಲಿ ನಡೆದ ಅಭಿವೃದ್ದಿ ಕಾರ್ಯಗಳ ಬಗ್ಗೆಯೂ ಕಾರ್ಯಕರ್ತರು ಗ್ರಾಮದ ಮನೆ ಮನೆಗೂ ತಲುಪಿಸುವ ಕೆಲಸವನ್ನು ಮಾಡಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.

ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ಲಾಕ್ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮಗಳಲ್ಲಿ ಅಕ್ರಮ ಸಕ್ರಮ ಅರ್ಜಿ ಬಾಕಿ ಇದ್ದಲ್ಲಿ, ಕರೆಂಟ್ ಇಲ್ಲದ ಮನೆ ಯಿದ್ದಲ್ಲಿ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಇದ್ದಲ್ಲಿ ಅಂಥವರನ್ನು ಗುರುತಿಸಿ ಅವರಿಗೆ ನೆರವು ನೀಡುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಬಡವರ ಪರ ಇರುವುದು ಕಾಂಗ್ರೆಸ್ ಸರಕಾರ ಮಾತ್ರ ಎಂದು ಜನರಿಗೆ ಗೊತ್ತಾಗಿದೆ. ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯಿಂದ ಜನ ತತ್ತರಿಸಿದ್ದಾರೆ. ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯಿಂದ ಜನತೆ ಸಂಕಷ್ಟದಲ್ಲಿದ್ದಾರೆ ಇದನ್ನು ಮರೆ ಮಾಚುವ ಉದ್ದೇಶದಿಂದ ಹಾಲು ಬೆಲೆ ಏರಿಕೆಯಾದ ಬಗ್ಗೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.

Advertisement

ಇದನ್ನೂ ಓದಿ: ಗ್ಯಾರಂಟಿ ಕೊಟ್ಟು ಚಕ್ರಬಡ್ಡಿ ವಸೂಲಿ ಮಾಡುತ್ತಿದೆ ಸರ್ಕಾರ: ಬೆಲೆ ಏರಿಕೆ ವಿರುದ್ಧ ಸಾರ್ವಜನಿಕರು ಹೇಳಿದ್ದೇನು? ನೋಡಿ

ಜಾನುವಾರುಗಳಿಗೆ ಕೊಡುವ ಆಹಾರದ ಬೆಲೆಯನ್ನು ಹೆಚ್ಚಳ ಮಾಡಿದವರು ಯಾರು ಎಂಬುದು ಜನರಿಗೆ ಗೊತ್ತಿದೆ. ಇಂಧನ ಬೆಲೆ ಕಡಿಮೆಯಾದರೆ ಎಲ್ಲಾ ಧರಗಳು ಕಡಿಮೆಯಾಗಲಿದೆ ಈ ವಿಚಾರವನ್ನು ಕಾರ್ಯಕರ್ತರು ಜನರಿಗೆ ತಿಳಿಸಬೇಕು ಎಂದು ಹೇಳಿದರು.

Advertisement

ಪಕ್ಷ ಸಂಘಟನೆಯ ಬಗ್ಗೆ ಶಾಸಕರು ಸಭೆಯಲ್ಲಿ ಕಾರ್ಯಕರ್ತರ,ಪ್ರಮುಖರ ಜೊತೆಗೆ ಚರ್ಚೆ ನಡೆಸಿದರು.

ಇದನ್ನೂ ಓದಿ: ಗ್ಯಾರಂಟಿ ಹೆಸರಿನಲ್ಲಿ ಮಧ್ಯಮ ವರ್ಗದ ಜೇಬಿನಿಂದ ತಿಂಗಳಿಗೆ 3,700 ರೂ. ಲೂಟಿ: ರಾಜ್ಯ ಸರ್ಕಾರದ ವಿರುದ್ಧ ಕಿಶೋರ್ ಕುಮಾರ್ ಪುತ್ತೂರು ವಾಗ್ದಾಳಿ

Advertisement

ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮಾನಾಥ ಶೆಟ್ಟಿ,ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರಹಿಮಾನ್ ಆಝಾದ್,ಪುಡಾ ಅಧ್ಯಕ್ಷ ಅಮಲರಾಮ‌ಚಂದ್ರ,ಯೂತ್ ಅಧ್ಯಕ್ಷ ಫಾರೂಕ್ ಪೆರ್ನೆ, ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಪ್ರಭಾ,ಬ್ಲಾಕ್ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು,ಪೂರ್ಣೇಶ್ ಭಂಡಾರಿ ,ವಲಯ ಅಧ್ಯಕ್ಷರುಗಳು,ಕಾರ್ಯಕರ್ತರು ಇದ್ದರು.

ಮತ್ತಷ್ಟು ಓದಲು‌ ಇಲ್ಲಿ ಕ್ಲಿಕ್ ಮಾಡಿ