ಮಂಗಳೂರು ಪ್ರವಾಸದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್: ವಂದೇ ಭಾರತ್ ಉದ್ಘಾಟನೆಗೂ ಮುನ್ನ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮಂಗಳೂರು: ಕರ್ನಾಟಕದ ರೈಲು ಮತ್ತು ಮೆಟ್ರೋ ಸಂಪರ್ಕ ಕ್ಷೇತ್ರದಲ್ಲಿ ಇಂದು ಐತಿಹಾಸಿಕ ದಿನವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ನಮ್ಮ ಮೆಟ್ರೋದ ಮಹತ್ವಾಕಾಂಕ್ಷಿ ‘ಪಿಂಕ್ ಲೈನ್’ (Pink Line) ಲೋಕಾರ್ಪಣೆ ಹಾಗೂ ಕರಾವಳಿ ಮತ್ತು ರಾಜಧಾನಿಯನ್ನು ಬೆಸೆಯುವ ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (Bengaluru-Mangaluru Vande Bharat Express) ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಈ ಐತಿಹಾಸಿಕ ಕಾರ್ಯಕ್ರಮಕ್ಕೂ ಮುನ್ನ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ಇಂದು ಬೆಳಿಗ್ಗೆ ಕಡಲನಗರಿ ಮಂಗಳೂರಿಗೆ ಆಗಮಿಸಿದ್ದಾರೆ. ಇಂದು ಬೆಳಿಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ (Capt. Brijesh Chowta) ಹಾಗೂ ಜಿಲ್ಲೆಯ ಬಿಜೆಪಿ ಶಾಸಕರು ಆತ್ಮೀಯವಾಗಿ ಬರಮಾಡಿಕೊಂಡರು.

Advertisement

ವಿಮಾನ ನಿಲ್ದಾಣದಿಂದ ನೇರವಾಗಿ ಮಂಗಳೂರಿನ ಪ್ರಸಿದ್ಧ ಮತ್ತು ಐತಿಹಾಸಿಕ ಶಕ್ತಿಕೇಂದ್ರವಾದ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ( ಸಚಿವರು ಭೇಟಿ ನೀಡಿದರು. ಈ ವೇಳೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಚಿವರನ್ನು ದೇವಸ್ಥಾನಕ್ಕೆ ಸ್ವಾಗತಿಸಿ, ಮಂಗಳೂರು ನಗರಕ್ಕೆ ಹೆಸರು ಬರಲು ಕಾರಣವಾದ ಮಂಗಳಾದೇವಿ ಕ್ಷೇತ್ರದ ಇತಿಹಾಸ ಹಾಗೂ ಮಹತ್ವದ ಕುರಿತು ವಿವರಿಸಿದರು.

ಇದನ್ನೂ ಓದಿ: ಕರಾವಳಿ ಜನರ ದಶಕಗಳ ಕನಸು ನನಸು!: ನವೆಂಬರ್ 13ಕ್ಕೆ ಬೆಂಗಳೂರು-ಮಂಗಳೂರು-ಮಡಗಾಂವ್ ‘ವಂದೇ ಭಾರತ್’ ರೈಲಿಗೆ ಪಿಎಂ ಮೋದಿ ಚಾಲನೆ!

Advertisement

ಬಳಿಕ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಪ್ರಧಾನಿ ಮೋದಿ ಅವರು ವರ್ಚುವಲ್ ಮೂಲಕ ರೈಲಿಗೆ ಚಾಲನೆ ನೀಡಲಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Advertisement