ಕರುನಾಡಿನ ರೈಲ್ವೆ ಕ್ರಾಂತಿಗೆ ಪ್ರಧಾನಿ ಮೋದಿ ಚಾಲನೆ!: ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್

ಬೆಂಗಳೂರು: ರಾಜಧಾನಿ ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ನೆರೆಯ ಗೋವಾ ರಾಜ್ಯದ ನಡುವಿನ ಪ್ರಯಾಣಕ್ಕೆ ಹೊಸ ವೇಗ ನೀಡುವ ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ (Bengaluru-Mangaluru-Madgaon Vande Bharat Express) ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು (ನ.13) ಚಾಲನೆ ನೀಡಿದ್ದಾರೆ.

ಬೆಂಗಳೂರಿನ ಐಐಎಂಬಿ (IIMB) ಆಡಿಟೋರಿಯಂನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿಸಿದ ಪ್ರಧಾನಿ ಮೋದಿ, ಇದರೊಂದಿಗೆ ಕರ್ನಾಟಕದ ಹಲವು ಮಹತ್ವದ ರೈಲ್ವೆ ಮೂಲಸೌಕರ್ಯ ಯೋಜನೆಗಳನ್ನೂ ಲೋಕಾರ್ಪಣೆಗೊಳಿಸಿ ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.

Advertisement

ಈ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ಸುಮಾರು 670 ಕಿಲೋಮೀಟರ್ ದೂರವನ್ನು ಕ್ರಮಿಸಲಿದ್ದು, ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾ ನಡುವೆ ವೇಗದ ಹಾಗೂ ಆರಾಮದಾಯಕ ಸಂಪರ್ಕ ಕಲ್ಪಿಸಲಿದೆ. ಬೆಂಗಳೂರಿನಿಂದ ಹೊರಡುವ ಈ ರೈಲು ಹಾಸನ, ಸಕಲೇಶಪುರ, ಮಂಗಳೂರು, ಉಡುಪಿ, ಮುರುಡೇಶ್ವರ, ಗೋಕರ್ಣ ಮತ್ತು ಕಾರವಾರ ಸೇರಿದಂತೆ ಪ್ರಮುಖ ಪ್ರವಾಸಿ ಹಾಗೂ ವಾಣಿಜ್ಯ ಕೇಂದ್ರಗಳನ್ನು ಸಂಪರ್ಕಿಸಿ ಅಂತಿಮವಾಗಿ ಗೋವಾದ ಮಡಗಾಂವ್  ತಲುಪಲಿದೆ.

ಇದನ್ನೂ ಓದಿ: ಬೆಂಗಳೂರು, ಮಂಗಳೂರು ಜನರ ಬಹುದಿನದ ಕನಸು ನನಸು: ಪಿಂಕ್ ಲೈನ್ ಮೆಟ್ರೋ, ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್, MRPL ಟರ್ಮಿನಲ್‌ಗೆ ಪ್ರಧಾನಿ ಮೋದಿ ಚಾಲನೆ

Advertisement

ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ ಇತರ ಪ್ರಮುಖ ರೈಲ್ವೆ ಯೋಜನೆಗಳು:

  1. ೪4ಅಮೃತ್ ಭಾರತ್ ರೈಲು ನಿಲ್ದಾಣಗಳ ಉದ್ಘಾಟನೆ:

    ‘ಅಮೃತ್ ಭಾರತ್ ನಿಲ್ದಾಣ’ ಯೋಜನೆಯಡಿ ಆಧುನಿಕ ಸೌಲಭ್ಯಗಳೊಂದಿಗೆ ಪುನರಾಭಿವೃದ್ಧಿಪಡಿಸಲಾಗಿರುವ ಚಾಮರಾಜನಗರ, ಚಿಕ್ಕಮಗಳೂರು, ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.

    Advertisement
  2. ಬಾಗಲಕೋಟೆ-ವಂಡಾಲ್ ರೈಲು ಮಾರ್ಗ ದ್ವಿಗುಣೀಕರಣ:

    284 ಕಿ.ಮೀ. ಉದ್ದದ ಗದಗ-ಹೊಟಗಿ ರೈಲು ಮಾರ್ಗ ದ್ವಿಗುಣೀಕರಣ ಯೋಜನೆಯ ಭಾಗವಾಗಿರುವ 45 ಕಿ.ಮೀ. ಉದ್ದದ ಬಾಗಲಕೋಟೆ-ವಂಡಾಲ್ ರೈಲು ಮಾರ್ಗದ ದ್ವಿಗುಣೀಕರಣ ಕಾಮಗಾರಿಯನ್ನು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಿದರು. ಇದರಿಂದ ಪ್ರಯಾಣಿಕರು ಮತ್ತು ಸರಕು ಸಾಗಣೆ ರೈಲುಗಳ ಸಂಚಾರ ಸುಧಾರಿಸಲಿದ್ದು, ಸ್ಥಳೀಯ ವ್ಯಾಪಾರ-ವಹಿವಾಟಿಗೆ ಉತ್ತೇಜನ ದೊರೆಯಲಿದೆ. ಜೊತೆಗೆ ಕೂಡ್ಗಿ ಎನ್‌ಟಿಪಿಸಿ (NTPC) ವಿದ್ಯುತ್ ಸ್ಥಾವರಕ್ಕೆ ಕಲ್ಲಿದ್ದಲು ಪೂರೈಕೆ ಮತ್ತಷ್ಟು ಸುಗಮವಾಗಲಿದೆ.

  3. ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ವಿದ್ಯುದ್ದೀಕರಣ:

    ಕಡಿದಾದ ಪಶ್ಚಿಮ ಘಟ್ಟದ 55 ಕಿ.ಮೀ. ಉದ್ದದ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ರೈಲು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿಯನ್ನೂ ಪ್ರಧಾನಿ ಲೋಕಾರ್ಪಣೆ ಮಾಡಿದರು. ಈ ಕಾಮಗಾರಿ ಪೂರ್ಣಗೊಂಡಿರುವುದರಿಂದ ಈಗ ಬೆಂಗಳೂರು-ಮಂಗಳೂರು ಸಂಪೂರ್ಣ ರೈಲು ಮಾರ್ಗವು 100% ವಿದ್ಯುದ್ದೀಕರಣಗೊಂಡಂತಾಗಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ