ಕಡಬ ಬಳಿ ಭೀಕರ ರಸ್ತೆ ಅಪಘಾತ: ಹಣ್ಣು ಸಾಗಿಸುತ್ತಿದ್ದ ಪಿಕಪ್ ವಾಹನ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸಾವು, ಮತ್ತೊಬ್ಬರು ಗಂಭೀರ

ಕಡಬ: ಹಣ್ಣು ಸಾಗಿಸುತ್ತಿದ್ದ ಪಿಕಪ್ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕಡಬ ತಾಲೂಕಿನ ಆಲಂಕಾರು ಸಮೀಪದ ನೆಕ್ರೆ ಬಳಿ ಇಂದು (ನ.14) ನಡೆದಿದೆ.  ಮಂಗಳೂರಿನಿಂದ ಕಡಬದ ಕಲಾರಕ್ಕೆ ಹಣ್ಣುಗಳನ್ನು ತುಂಬಿಕೊಂಡು ಬರುತ್ತಿದ್ದ ಪಿಕಪ್ ವಾಹನವು, ಆಲಂಕಾರು ಸಮೀಪದ ನೆಕ್ರೆ ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

 ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ಪಿಕಪ್ ವಾಹನದಲ್ಲಿದ್ದ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ತಕ್ಷಣವೇ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರಾದರೂ, ತೀವ್ರ ರಕ್ತಸ್ರಾವದಿಂದಾಗಿ ಓರ್ವ ಗಾಯಾಳು ಆಸ್ಪತ್ರೆ ತಲುಪುವ ಮುನ್ನವೇ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಬ್ಬ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಇದನ್ನೂ ಓದಿ: ಅಸ್ಸಾಂನ ಕಾಜಿರಂಗಾ ಬಳಿ ಭೀಕರ ರಸ್ತೆ ಅಪಘಾತ: ಟ್ರಕ್-ಮಿನಿಬಸ್ ನಡುವೆ ಮುಖಾಮುಖಿ ಡಿಕ್ಕಿ; 23 ಮಂದಿ ಸಾವು

ಮೃತಪಟ್ಟವರು ಹಾಗೂ ಗಂಭೀರವಾಗಿ ಗಾಯಗೊಂಡವರ ಹೆಸರು ಮತ್ತು ವಿಳಾಸ ಇನ್ನೂ ಪತ್ತೆಯಾಗಿಲ್ಲ. ಅಪಘಾತದ ಮಾಹಿತಿ ತಿಳಿದ ತಕ್ಷಣವೇ ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮೃತರ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

Advertisement

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Advertisement