ಮಂಗಳೂರು ವಿಮಾನ ನಿಲ್ದಾಣದಲ್ಲೂ ತಪ್ಪಿದ ಭಾರೀ ದುರಂತ: ಟೇಕಾಫ್ ವೇಳೆ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ

ಮಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ನಡೆದ ವಿಮಾನ ತಾಂತ್ರಿಕ ದೋಷದ ಬೆನ್ನಲ್ಲೇ, ಈಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಅಂತಹದ್ದೇ ಆತಂಕಕಾರಿ ಘಟನೆ ನಡೆದಿದೆ. ಸೋಮವಾರ ಸಂಜೆ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ (IndiGo) ವಿಮಾನದಲ್ಲಿ ಟೇಕಾಫ್ ಆಗುವ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಅವರ ಸಮಯಪ್ರಜ್ಞೆಯಿಂದ ಸಂಭವಿಸಬಹುದಿದ್ದ ಭಾರೀ ದೊಡ್ಡ ದುರಂತ ತಪ್ಪಿದೆ. ಈ ವಿಮಾನದಲ್ಲಿ ಮಂಗಳೂರಿನ  ಮಾಜಿ ಸಂಸದ ನಳಿನ್​​ ಕುಮಾರ್​​ ಕಟೀಲ್​​ ಕೂಡ ಇದ್ದರು ಎಂದು ಹೇಳಲಾಗಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಹೊರಡಲು ಸಿದ್ಧವಾಗಿದ್ದ ಈ ವಿಮಾನದಲ್ಲಿ ಒಟ್ಟು 229 ಪ್ರಯಾಣಿಕರು ಹಾಗೂ 7 ಮಂದಿ ಸಿಬ್ಬಂದಿ ಸೇರಿದಂತೆ ಒಟ್ಟು 236 ಜನ aboard (ದಲ್ಲಿದ್ದರು) ಇದ್ದರು. ಸೋಮವಾರ ಸಂಜೆ 6.10ರ ಸುಮಾರಿಗೆ ರನ್‌ವೇ ಮೇಲೆ ವೇಗವಾಗಿ ಸಾಗುತ್ತಿದ್ದ ವಿಮಾನವು ಟೇಕಾಫ್ ಆಗಲು ಕೆಲವೇ ಮೀಟರ್‌ಗಳು ಬಾಕಿ ಇರುವಾಗ, ವಿಮಾನದ ಕೆಳಭಾಗದಲ್ಲಿ ಬೆಂಕಿಯ ಕಿಡಿಯೊಂದಿಗೆ ಸ್ಪಾರ್ಕ್ (Engine/Technical Snag) ಕಾಣಿಸಿಕೊಂಡಿದೆ. ತಕ್ಷಣವೇ ಪರಿಸ್ಥಿತಿಯನ್ನು ಗ್ರಹಿಸಿದ ಪೈಲಟ್, ತುರ್ತು ಬ್ರೇಕ್ ಹಾಕಿ ವಿಮಾನದ ವೇಗವನ್ನು ತಗ್ಗಿಸಿ ರನ್‌ವೇನಲ್ಲೇ ಸುರಕ್ಷಿತವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಮಾನದ ಚಕ್ರ ಅಥವಾ ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ದೋಷವಿರಬಹುದು ಎಂದು ಶಂಕಿಸಲಾಗಿದೆ.

Advertisement

ಇದನ್ನೂ ಓದಿ: ರಸ್ತೆಗೆ ಅಪ್ಪಳಿಸಿ ಬೆಂಕಿಯುಂಡೆಯಾದ ಲಿಯರ್‌ಜೆಟ್‌, ವಿಮಾನದಲ್ಲಿದ್ದ 9 ಮಂದಿ ದಾರುಣ ಸಾವು

ಟೇಕಾಫ್ ಆಗುವ ಅಂತಿಮ ಹಂತದಲ್ಲಿ ವಿಮಾನ ಹಠಾತ್ ನಿಂತಿದ್ದರಿಂದ ಒಳಗೆ ಇದ್ದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಪೈಲಟ್ ಹಾಗೂ ಸಿಬ್ಬಂದಿ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದ್ದರಿಂದ ಪ್ರಯಾಣಿಕರು ನಿರಾಳರಾಗಿದ್ದಾರೆ. ಬಳಿಕ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಬಳಿಸಲಾಗಿದ್ದು, ಪರ್ಯಾಯ ವಿಮಾನದ ಮೂಲಕ ಬೆಂಗಳೂರಿಗೆ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ. ಸಕಾಲದಲ್ಲಿ ಎಚ್ಚೆತ್ತುಕೊಂಡ ಪೈಲಟ್ ಸಾಹಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

Advertisement

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Advertisement