ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ವರ್ಗಾವಣೆ; ನೂತನ ಕಮಿಷನರ್ ಆಗಿ ಆರ್. ಹಿತೇಂದ್ರ ನೇಮಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಪೊಲೀಸ್ ಆಯುಕ್ತ ಸ್ಥಾನದಲ್ಲಿ ಮತ್ತೊಮ್ಮೆ ಪ್ರಮುಖ ಬದಲಾವಣೆ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ಬುಧವಾರ (ನವೆಂಬರ್ 18) ಅಧಿಕೃತವಾಗಿ ವರ್ಗಾವಣೆ ಮಾಡಿದ್ದು, ಅಗ್ನಿಶಾಮಕ ದಳದ ಎಡಿಜಿಪಿಯಾಗಿ ನೇಮಿಸಿ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಆರ್. ಹಿತೇಂದ್ರ ಅವರನ್ನು ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದೀಗ ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.  ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಂತ್ರಿ ಕುಮಾರ್​​ ಸ್ವಾಮಿ ಪ್ರಸ್ತಾಪ ಮಾಡಿದರು. ಇದೀಗ ಈ ಹೇಳಿಕೆಯ ಕೆಲವು ದಿನಗಳ ನಂತರ ಅವರ ವರ್ಗಾವಣೆ ಆಗಿದೆ.

ಬದಲಾವಣೆಯ ಹಿನ್ನೆಲೆ ಏನು?

Advertisement

 ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದ ದುರಂತದ ಹಿನ್ನೆಲೆಯಲ್ಲಿ ಅಂದಿನ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್ ಅವರನ್ನು ಸರ್ಕಾರ ಅಮಾನತುಗೊಳಿಸಿತ್ತು. ಬಳಿಕ ಆ ಸ್ಥಾನಕ್ಕೆ 1996ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಿಸಲಾಗಿತ್ತು.

ಸೀಮಂತ್ ಕುಮಾರ್ ಸಿಂಗ್ ಅವರನ್ನು ಕಮಿಷನರ್ ಹುದ್ದೆಯಿಂದ ತಪ್ಪಿಸಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇದೀಗ ಆಡಳಿತಾತ್ಮಕ ಮತ್ತು ಭದ್ರತಾ ದೃಷ್ಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಆರ್. ಹಿತೇಂದ್ರ ಅವರ ಕೈಗೆ ಬೆಂಗಳೂರು ನಗರ ಪೊಲೀಸ್ ಕಮಾಂಡ್‌ ಒಪ್ಪಿಸಲಾಗಿದೆ.

Advertisement

ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಹೇಳಿಕೆ

ಕರ್ನಾಟಕದಲ್ಲಿ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ (ಕುಟುಕು ಕಾರ್ಯಾಚರಣೆ) ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಡುವೆ ನೇರ ವಾಕ್ಸಮರ ಹಾಗೂ ತನಿಖೆಯ ಮಹತ್ವದ ಬೆಳವಣಿಗೆಗಳು ನಡೆದಿವೆ. ಸಿಸಿಬಿ (CCB) ಸೈಬರ್ ಕ್ರೈಂ ಪೊಲೀಸರು ನಡೆಸುತ್ತಿರುವ ತನಿಖೆಯ ಪ್ರಗತಿಯ ಕುರಿತು ನವೆಂಬರ್ ಆರಂಭದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಬಂಧಿತನಾದ ಆರೋಪಿ ರಿತೇಶ್ ಪಾಂಡೆ ವಿಚಾರಣೆಯಲ್ಲಿ ಮಹತ್ವದ ಮಾಹಿತಿ ನೀಡಿದ್ದಾನೆ. ಪ್ರಜ್ವಲ್ ಪ್ರಸಾದ್ ಎಂಬುವವರ ಸೂಚನೆಯಂತೆ ತಾನು ಮತ್ತು ವಿನೋದ್ ಶರ್ಮಾ ದೆಹಲಿಯ ಕರೋಲ್ ಬಾಗ್‌ನಲ್ಲಿ ಮೊಬೈಲ್ ಫೋನ್ ಖರೀದಿಸಿ, ನವದೆಹಲಿಯ ಕುಶಕ್ ರಸ್ತೆಯಲ್ಲಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಅಧಿಕೃತ ನಿವಾಸದಲ್ಲಿ ಪ್ರಜ್ವಲ್ ಪ್ರಸಾದ್ ಅವರಿಗೆ ತಲುಪಿಸಿದ್ದಾಗಿ ಹೇಳಿಕೆ ನೀಡಿದ್ದರು.

Advertisement

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ