ಸೌಜನ್ಯ ಕೊಲೆ ಪ್ರಕರಣದ : ಗಿರೀಶ್ ಮಟ್ಟಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿಗೆ ಎಸ್‌ಐಟಿ ನೋಟಿಸ್

ಮಂಗಳೂರು; ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿರುವ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ತೀವ್ರಗೊಳಿಸಿದೆ. ತನಿಖೆಯ ಭಾಗವಾಗಿ ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಎಸ್‌ಐಟಿ ಅಧಿಕಾರಿಗಳು ಇದೀಗ ನೋಟಿಸ್ ಜಾರಿ ಮಾಡಿದ್ದಾರೆ.

ತನಿಖೆಗೆ ಪೂರಕವಾದ ದಾಖಲೆಗಳು ಹಾಗೂ ಮಾಹಿತಿ ಒದಗಿಸುವ ಸಂಬಂಧ ಅಪರಾಧ ಪ್ರಕ್ರಿಯಾ ಸಂಹಿತೆ (CrPC) ಸೆಕ್ಷನ್ 91ರ ಅಡಿಯಲ್ಲಿ ಗಿರೀಶ್ ಮಟ್ಟಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಎಸ್‌ಐಟಿ ನೋಟಿಸ್ ನೀಡಿದೆ. ಮಂಗಳೂರಿನಲ್ಲಿರುವ ಎಸ್‌ಐಟಿ ಕಚೇರಿಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸುವಂತೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿಯಿರುವ ಮಾಹಿತಿ ಮತ್ತು ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

Advertisement

ಇದನ್ನೂ ಓದಿ: ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ, ವಿಟ್ಠಲ್ ಗೌಡ ವಿರುದ್ಧ ಎಸ್ಐಟಿಗೆ ದೂರು

ಎಸ್‌ಐಟಿ ನೋಟಿಸ್ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಮುಂದಿನ ವಾರ ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತಂಡವು ಸೌಜನ್ಯ ಪ್ರಕರಣದ ಮರುತನಿಖೆಯನ್ನು ಕೈಗೆತ್ತಿಕೊಂಡಿದೆ. ಈಗಾಗಲೇ ಪ್ರಕರಣದ ಹಿಂದಿನ ತನಿಖಾಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಸಾಕ್ಷಿದಾರರನ್ನು ವಿಚಾರಣೆ ನಡೆಸಿರುವ ಎಸ್‌ಐಟಿ, ಇದೀಗ ಹೋರಾಟದ ಮುಂಚೂಣಿಯಲ್ಲಿದ್ದ ಗಿರೀಶ್ ಮಟ್ಟಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನೋಟಿಸ್ ನೀಡಿರುವುದು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

Advertisement

ಮತ್ತಷ್ಟು ಓದಲು ಇಲ್ಲಿ ಕ್ಲಿಕ್‌ ಮಾಡಿ

Advertisement