ತಿರುಪ್ಪರಂಕುಂದ್ರಂ ಬೆಟ್ಟದ ದೀಪಸ್ತಂಭ ವಿವಾದ: ಸುಪ್ರೀಂ ಮಧ್ಯಂತರ ಆದೇಶದ ಬಳಿಕವೂ ಉಚ್ಚಿಪಿಳ್ಳೈಯಾರ್ ಮಂಟಪದಲ್ಲೇ ದೀಪ

ಮಧುರೈ: ತಮಿಳುನಾಡಿನ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಗೈ ದೀಪೋತ್ಸವದ ಅಂಗವಾಗಿ ದೀಪ ಬೆಳಗಿಸುವ ವಿಚಾರ ವಿವಾದಕ್ಕೆ ಕಾರಣವಾಗಿದೆ. ದೀಪಸ್ತಂಭದಲ್ಲಿ ದೀಪ ಬೆಳಗಿಸುವ ಕುರಿತು ನಡೆದ ಕಾನೂನು ಹೋರಾಟ, ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶ ಹಾಗೂ ನಂತರದ ಬೆಳವಣಿಗೆಗಳು ದೇಶದ ಗಮನ ಸೆಳೆದಿವೆ.

ಈ ಬೆಳವಣಿಗೆ ಹಿಂದೂಗಳ ಧಾರ್ಮಿಕ ಆಚರಣೆ, ಸಂಪ್ರದಾಯ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನ ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Advertisement

ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಹಕ್ಕು ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದೆ. ಅದೇ ರೀತಿ ನ್ಯಾಯಾಲಯದ ಆದೇಶಗಳನ್ನು ಪಾಲಿಸುವುದು ಆಡಳಿತದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ತಿರುಪ್ಪರಂಕುಂದ್ರಂ ದೀಪೋತ್ಸವ ವಿವಾದದಲ್ಲಿ ನ್ಯಾಯಾಲಯದ ಆದೇಶ, ಸರ್ಕಾರದ ನಿಲುವು ಮತ್ತು ಭಕ್ತರ ಧಾರ್ಮಿಕ ಭಾವನೆಗಳ ಕುರಿತು ಹಲವು ಪ್ರಶ್ನೆಗಳು ಮೂಡಿವೆ.

ತಮಿಳುನಾಡು ದೀಪೋತ್ಸವ ವಿವಾದ: ಸುಪ್ರೀಂ ಕೋರ್ಟ್ ಆದೇಶಕ್ಕೂ ಬೆಲೆ ಇಲ್ಲವೇ? ಹಿಂದೂಗಳ ಧಾರ್ಮಿಕ ಹಕ್ಕಿಗಾಗಿ ಭುಗಿಲೆದ್ದ ಹೋರಾಟ

Advertisement

ತಮಿಳುನಾಡಿನ ಮಧುರೈ ಜಿಲ್ಲೆಯ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಗೈ ದೀಪೋತ್ಸವದ ಅಂಗವಾಗಿ ದೀಪ ಬೆಳಗಿಸುವ ವಿಚಾರ ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಹಿಂದೂಗಳ ಧಾರ್ಮಿಕ ಆಚರಣೆಯ ಹಕ್ಕು, ನ್ಯಾಯಾಲಯದ ಆದೇಶದ ಪಾಲನೆ ಮತ್ತು ರಾಜ್ಯ ಸರ್ಕಾರದ ನಡೆ ಕುರಿತು ಹೊಸ ಚರ್ಚೆ ಆರಂಭವಾಗಿದೆ.

ತಮಿಳುನಾಡಿನ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿರುವ ಪುರಾತನ ದೀಪಸ್ತಂಭದಲ್ಲಿ ಕಾರ್ತಿಗೈ ದೀಪೋತ್ಸವದ ದೀಪ ಬೆಳಗಿಸುವ ವಿಚಾರ ಹಿಂದೂ ಸಮುದಾಯ ಮತ್ತು ತಮಿಳುನಾಡು ಸರ್ಕಾರದ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ, ನವೆಂಬರ್ 24ರಂದು ವಿವಾದಿತ ದೀಪಸ್ತಂಭದಲ್ಲಿ ದೀಪ ಬೆಳಗಿಸದಿರುವುದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

Advertisement

ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಮಧ್ಯಂತರ ಆದೇಶ

ತಿರುಪ್ಪರಂಕುಂದ್ರಂ ಬೆಟ್ಟದ ದೀಪಸ್ತಂಭದಲ್ಲಿ ಕಾರ್ತಿಗೈ ದೀಪೋತ್ಸವದಂದು ದೀಪ ಬೆಳಗಿಸಲು ಅನುಮತಿ ಕೋರಿ ನಡೆದ ಕಾನೂನು ಹೋರಾಟದಲ್ಲಿ ನವೆಂಬರ್ 20ರಂದು ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿತ್ತು.

ದೇವಸ್ಥಾನದ ವತಿಯಿಂದ ಅಧಿಕೃತವಾಗಿ ನೇಮಿಸಲಾದ ತಂಡ ಮತ್ತು ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲಿ ನವೆಂಬರ್ 24ರಂದು ಒಂದು ಬಾರಿಯ ಕ್ರಮವಾಗಿ ದೀಪ ಬೆಳಗಿಸಲು ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ ಈ ಆದೇಶವು ವಿವಾದದ ಅಂತಿಮ ತೀರ್ಪಲ್ಲ ಎಂಬುದನ್ನೂ ನ್ಯಾಯಾಲಯ ಸ್ಪಷ್ಟಪಡಿಸಿತ್ತು.

ಸಾಂಪ್ರದಾಯಿಕ ಸ್ಥಳದಲ್ಲೇ ದೀಪ ಬೆಳಗಿಸಿದ ಆಡಳಿತ

ನ್ಯಾಯಾಲಯದ ಆದೇಶದ ನಡುವೆಯೂ ನವೆಂಬರ್ 24ರಂದು ವಿವಾದಿತ ‘ದೀಪತ್ತೂನ್’ನಲ್ಲಿ ದೀಪ ಬೆಳಗಿಸಲಿಲ್ಲ. ಬದಲಾಗಿ, ಈ ಹಿಂದೆ ಆಚರಣೆ ನಡೆಯುತ್ತಿದ್ದ ಉಚ್ಚಿಪಿಳ್ಳೈಯಾರ್ ದೀಪ ಮಂಟಪದಲ್ಲೇ ಮಹಾದೀಪ ಬೆಳಗಿಸಲಾಯಿತು.

ಇದರಿಂದ ಆಕ್ರೋಶಗೊಂಡ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೊಲೀಸರೊಂದಿಗೆ ಮಾತಿನ ಚಕಮಕಿ ಹಾಗೂ ಘರ್ಷಣೆಯೂ ಸಂಭವಿಸಿತು. ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಹಿಂದೂಗಳ ಧಾರ್ಮಿಕ ಹಕ್ಕಿನ ಪ್ರಶ್ನೆ

ಈ ವಿವಾದ ಕೇವಲ ದೀಪ ಬೆಳಗಿಸುವ ಸ್ಥಳಕ್ಕೆ ಸೀಮಿತವಾಗಿಲ್ಲ. ಹಿಂದೂಗಳ ಧಾರ್ಮಿಕ ಆಚರಣೆ ಮತ್ತು ಸಂಪ್ರದಾಯಗಳನ್ನು ಪಾಲಿಸುವ ಹಕ್ಕಿನ ಪ್ರಶ್ನೆಯೂ ಇದರೊಂದಿಗೆ ಬೆಸೆದುಕೊಂಡಿದೆ.

ದೀಪತ್ತೂನ್‌ನಲ್ಲಿ ದೀಪ ಬೆಳಗಿಸುವುದು ಹಿಂದೂಗಳ ಧಾರ್ಮಿಕ ಆಚರಣೆಯ ಭಾಗವಾಗಿದ್ದು, ನ್ಯಾಯಾಲಯದ ಆದೇಶದಂತೆ ಆಚರಣೆಗೆ ಅವಕಾಶ ನೀಡಬೇಕು ಎಂಬುದು ಹಿಂದೂ ಸಂಘಟನೆಗಳ ಪ್ರಮುಖ ಆಗ್ರಹವಾಗಿದೆ.

ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

ಸುಪ್ರೀಂ ಕೋರ್ಟ್ ಆದೇಶದ ಪಾಲನೆಯಾಗಿಲ್ಲ ಎಂದು ಆರೋಪಿಸಿ ಹಿಂದೂ ಧರ್ಮ ಪರಿಷತ್ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವುದಾಗಿ ವರದಿಯಾಗಿದೆ. ಮತ್ತೊಂದೆಡೆ, ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದೆ.

ಈ ಬೆಳವಣಿಗೆ ಇದೀಗ ದೇಶದಾದ್ಯಂತ ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯ ಮತ್ತು ನ್ಯಾಯಾಲಯದ ಆದೇಶಗಳ ಅನುಷ್ಠಾನದ ಕುರಿತು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ವಿಚಾರದಲ್ಲಿ ಕೈ vs ಕೈ; ಜಟಾಪಟಿ: ಪ್ರಧಾನಿ ಮೋದಿ ಮುಂದೆ ಸಿಎಂ ಡಿಕೆಶಿ ಮಾಡಿದ ಮನವಿಗೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಮಾಣಿಕ್ಕಂ ಟಾಗೋರ್ ತೀವ್ರ ಆಕ್ಷೇಪ

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಗೌರವ ಸಿಗಬೇಕೇ?

ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ಯಾವುದೇ ಧರ್ಮದ ಆಚರಣೆಗಳ ವಿಚಾರದಲ್ಲಿ ಕಾನೂನು ಮತ್ತು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳುವುದು ಆಡಳಿತದ ಜವಾಬ್ದಾರಿಯಾಗಿದೆ. ತಿರುಪ್ಪರಂಕುಂದ್ರಂ ವಿವಾದದಲ್ಲಿ ನ್ಯಾಯಾಲಯದ ಆದೇಶಕ್ಕೆ ಗೌರವ ನೀಡಿ, ಹಿಂದೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

ಈ ವಿಚಾರದ ಕುರಿತು ನಿಮ್ಮ ಅಭಿಪ್ರಾಯವೇನು?

ಸಂವಿಂಧಾನ ಕೇವಲ ಭಾಷಣ ಮತ್ತು ಚುನಾವಣೆ ಪ್ರಚಾರಕಷ್ಟೇ ಸೀಮಿತವೇ?

ಹಿಂದೂಗಳ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳಿಗೆ ಸಂಪೂರ್ಣ ಅವಕಾಶ ನೀಡಬೇಕೇ?

ನ್ಯಾಯಾಲಯದ ಆದೇಶಗಳನ್ನು ಸರ್ಕಾರ ಕಡ್ಡಾಯವಾಗಿ ಪಾಲಿಸಬೇಕೇ?

ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಇಂತಹ ವಿವಾದಗಳನ್ನು ಬಗೆಹರಿಸಲು ಯಾವ ಕ್ರಮ ಕೈಗೊಳ್ಳಬೇಕು?

ಈ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಏನು ಮಾಡಬೇಕು?

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ