Breaking News

Shocking: ಮಹಿಳೆಯರ ಒಳ ಉಡುಪು ಕದಿಯುವುದೇ ಇವನ ಕೆಲಸ! ಮುಂದೇನಾಯ್ತು?

ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಮಹನಗರದಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಲೇ ಇದೆ. ಆದರೆ ಇಲ್ಲೊಂದು ವಿಲಕ್ಷಣ ಘಟನೆ ನಡೆದಿದ್ದು ವ್ಯಕ್ತಿಯೊಬ್ಬ ಮಹಿಳೆಯರ ಒಳ ಉಡುಪು ಕಳವು ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.

ಮಹಿಳೆಯರ ಉಡುಪುಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ಹೆಬ್ಬುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಹೆಬ್ಬಗೋಡಿ ನಿವಾಸಿ ಅಮಲ್(23) ಬಂಧಿತ ಆರೋಪಿ. ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಆರ್‌ಎಫ್‌ಒ: ಸ್ನೇಹಿತ ಪರಾರಿ

ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ವ್ಯಕ್ತಿಯೊಬ್ಬ ಕಟ್ಟಡದ ಮೇಲೆ ಮತ್ತು ಮನೆಯ ಅಂಗಳದಲ್ಲಿ ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕದಿಯುವುದು, ಅವುಗಳನ್ನು ಧರಿಸಿ, ಫೋಟೊ ತೆಗೆದುಕೊಂಡು ಸಾರ್ವಜನಿಕವಾಗಿ ಪ್ರದರ್ಶಿಸುತ್ತಿರುವ ಮಾಹಿತಿ ಪೊಲೀಸರಿಗೆ ಬಂದಿತ್ತು.

ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ತೆರಳಿ, ವಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಮಹಿಳೆಯರ ಒಳ ಉಡುಪು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಪ್ರಾಥಮಿಕ ತನಿಖೆ ವೇಳೆ, ಆರೋಪಿ ಅಮಲ್, ಮಹಿಳೆಯರ ಒಳ ಉಡುಪುಗಳನ್ನು ಕದ್ದು, ಅವನ್ನು ಧರಿಸಿಕೊಂಡು ಫೋಟೊ ತೆಗೆದುಕೊಂಡಿರುವ ಹಲವಾರು ಫೋಟೊಗಳು ದೊರೆತಿವೆ. ನಂತರ ಆತ ವಾಸವಿದ್ದ ಮನೆಯ ಪರಿಶೀಲನೆ ಮಾಡಿದಾಗ, ಮನೆಯಲ್ಲಿಯೂ ಮಹಿಳೆಯರ ಒಳ ಉಡುಪುಗಳನ್ನು ಸಂಗ್ರಹಿಸಿಟ್ಟುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಹುಬ್ಬಳ್ಳಿ ಕೂಡ ಇಂತಹದ್ದೇ ಸೈಕೋನನ್ನು ಬಂಧಿಸಲಾಗಿತ್ತು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು