Breaking News

Karnataka Session: ಎರಡು ಲೈನ್‌ ಭಾಷಣ ಮಾಡಿದ ಕರ್ನಾಟಕ ರಾಜ್ಯಪಾಲ ಗೆಹ್ಲೋಟ್‌

Karnataka Assembly Session Governor Thawar Chand Gehlot gave a two-line speech 

ಬೆಂಗಳೂರು: ತಮಿಳುನಾಡು, ಕೇರಳ ರಾಜ್ಯಗಳ ನಂತರ ಇದೀಗ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಜಟಾಪಟಿ ಆರಂಭಗೊಂಡಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  ಅವರು ರಾಜ್ಯ ಸರ್ಕಾರ ನೀಡಿದ ಭಾಷಣದಲ್ಲಿ ಕೇವಲ ಎರಡು ಲೈನ್‌ಗಳನ್ನಷ್ಟೇ ಓದಿ ಮುಗಿಸಿದರು.

ಸದನದ ಆರಂಭಗೊಳ್ಳುವುದೇ ರಾಜ್ಯಪಾಲರ ಭಾಷಣದೊಂದಿಗೆ. ಅದರಂತೆ ಇಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ನೀಡಿದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಲೈನ್‌ಗಳನ್ನು ಓದಿ ಭಾಷಣವನ್ನು ಮುಕ್ತಾಯಗೊಳಿಸಿದರು.

Advertisement

ಇದನ್ನೂ ಓದಿ:‌ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ

“ಮುಖ್ಯಮಂತ್ರಿ, ಸಭಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರಿಗೆ ಜಂಟಿ ಅಧಿವೇಶನಕ್ಕೆ ಸ್ವಾಗತ. ಸರ್ಕಾರ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಗೆ ಬದ್ಧವಾಗಿದೆ. ರಾಜ್ಯದ ಆರ್ಥಿಕ, ಸಾಮಾಜಿಕ, ಬೌದ್ಧಿಕ ವಿಕಾಸ 2 ಪಟ್ಟು ಹೆಚ್ಚಿಸಲು ಸರ್ಕಾರ ಬದ್ಧ. ಜೈಹಿಂದ್, ಜೈ ಕರ್ನಾಟಕ” ಎಂದು ಹೇಳಿ ಭಾಷಣ ನಿಲ್ಲಿಸಿದರು.

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿನ 11 ಪ್ಯಾರಾಗಳ ಬಗ್ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದರು, ಇದರಲ್ಲಿ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಪರಿಚಯಿಸಿದ್ದಕ್ಕಾಗಿ ಕೇಂದ್ರ ಸರ್ಕಾರದ ತೀವ್ರ ಟೀಕೆಯೂ ಸೇರಿತ್ತು.

ರಾಜ್ಯಪಾಲರ ಸಭಾತ್ಯಾಗದ ನಂತರ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಈ ಕ್ರಮವನ್ನು “ಸಂವಿಧಾನದ ಉಲ್ಲಂಘನೆ” ಎಂದರು. “ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು, ಕೇಂದ್ರ ಸರ್ಕಾರವು ರಾಜ್ಯಪಾಲರು ಸಿದ್ಧಪಡಿಸಿದ ಭಾಷಣವನ್ನು ಓದುವಂತೆ ಮಾಡಿದೆ. ಇದು ಸಂವಿಧಾನದ ಉಲ್ಲಂಘನೆಯಾಗಿದೆ” ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು