Breaking News

Puttur Kambala: 33ನೇ ವರ್ಷದ ಪುತ್ತೂರು ಕಂಬಳಕ್ಕೆ ಅದ್ದೂರಿಯ ಚಾಲನೆ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಜಾತ್ರಾ ಗದ್ದೆಯಲ್ಲಿ ಪ್ರತೀ ವರ್ಷ ನಡೆಯುವ ಐತಿಹಾಸಿಕ ಪುತ್ತೂರು ಕಂಬಳಕ್ಕೆ ಅದ್ದೂರಿಯ ಚಾಲನೆ ನೀಡಲಾಗಿದೆ.

ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ ಅವರು ಕೋಟಿ ಚೆನ್ನಯ ಜೋಡುಕರೆಯಲ್ಲಿ 33 ನೇ ವರ್ಷದ ಕಂಬಳ ಕೂಟಕ್ಕೆ ಚಾಲನೆ ನೀಡಿದರು.

Advertisement

Puttur Kambala Photos 33rd annual Puttur Kambala beginsಕಂಬಳ ಕೂಟಕ್ಕೆ 200 ಕ್ಕೂ ಹೆಚ್ಚು ಜತೆ ಕೋಣಗಳು ಆಗಮಿಸಿವೆ. ಹೇಳಿ ಕೇಳಿ, ಪುತ್ತೂರು ಕಂಬಳವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಕಂಬಳವಾಗಿದ್ದು, ಈ ಬಾರಿ ಸಿನಿಮಾ ನಟರು ಕಂಬಳದ ಸಂಭ್ರಮದಲ್ಲಿ ಭಾಗಿಯಾಗುವ ಮೂಲಕ ಕರಾವಳಿಯ ಸಂಸ್ಕೃತಿಯ ಪ್ರತೀಕವಾಗಿರುವ ಕಂಬಳಕ್ಕೆ ಇನ್ನಷ್ಟು ಮೆರುಗು ನೀಡಲಿದ್ದಾರೆ.

Puttur Kambala Photos 33rd annual Puttur Kambala begins

ನಟಿ ಪ್ರಿಯಾಂಕ ಉಪೇಂದ್ರ, ಬಿಗ್‌ಬಾಸ್ ರನ್ನರ್‌ಅಪ್ ರಕ್ಷಿತಾ ಶೆಟ್ಟಿ, ನಟರಾದ ಆದಿತ್ಯ, ಶ್ರೇಯಾನ್ ಮಂಜು, ಶನಿಲ್ ಗುರು, ಜೆಪಿ ತುಮಿನಾಡು, ಪ್ರಕಾಶ್ ತುಮಿನಾಡು, ಧರ್ಮ ಕೀರ್ತಿರಾಜ್, ಸಿನಿಮಾ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಇಂದು ಸಂಜೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಗಣ್ಯಾತಿಗಣ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ : Milestone: 500 ಪಂದ್ಯ ಗೆದ್ದು ದಾಖಲೆ ಬರೆದ ಪಿ.ವಿ ಸಿಂಧು

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು