Breaking News

Breaking: ತಂದೆಗೆ ಚೂರಿ ಹಾಕಿ, ತಾನು ಗುಂಡು ಹಾರಿಸಿಕೊಂಡ ಯುವಕ

ಕಡಬ: ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗನೊಬ್ಬ, ತಂದೆಗೆ ಚೂರಿಯಿಂದ ಇರಿದು ಬಳಿಕ ತಾನೂ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.

ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಮಗ ಮೋಕ್ಷ ಶೂಟೌಟ್ ಮಾಡಿಕೊಂಡು ಮೃತಪಟ್ಟವರು.ಯಾವುದೋ ಕಾರಣಕ್ಕಾಗಿ ತಂದೆಯೊಂದಿಗೆ ಜಗಳಕ್ಕಿಳಿದ ಮೋಕ್ಷ ಬಳಿಕ ತಂದೆಗೆ ಇರಿದು ಮನೆಯಲ್ಲಿದ್ದ ಕೋವಿಯಿಂದ ಶೂಟೌಟ್ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

Advertisement

ಇದನ್ನೂ ಓದಿ: Movie : ಮೊದಲ ದಿನದ ಕಲೆಕ್ಷನ್ : ಧುರಂಧರ್ ದಾಖಲೆ ಮುರಿದ ಬಾರ್ಡರ್-2

ಘಟನೆಯ ವಿವರ:

ಮೂಲತಃ ಕೇರಳದವರಾದ ವಸಂತ ಅಮೀನ್ ಅವರು ರಾಮಕುಂಜದ ಪಾದೆಯಲ್ಲಿ ಜಾಗ ಖರೀದಿಸಿ ಮನೆ ನಿರ್ಮಿಸಿಕೊಂಡಿದ್ದರು. ಅಲ್ಲಿ ಅವರು ತಮ್ಮ ತಂದೆ ಹಾಗೂ ಮಗನೊಂದಿಗೆ ವಾಸವಾಗಿದ್ದರು. ಜನವರಿ 24ರಂದು ಸಂಜೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ತಂದೆ ಮಗನ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಆವೇಶಕ್ಕೊಳಗಾದ ಮೋಕ್ಷ. ತಂದೆಗೆ ಚೂರಿಯಿಂದ ಇರಿದಿದ್ದಾನೆ. ಬಳಿಕ ಮನೆಯಲ್ಲಿದ್ದ ಕೋವಿಯಿಂದ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಮುಂದಿನ ಕ್ರಮ ಕೈಗೊ‌ಂಡಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು