ಉಪ್ಪಿನಂಗಡಿ: ಇಲ್ಲಿನ ಶ್ರೀರಾಮ ಶಾಲೆಯಲ್ಲಿ ನಿರ್ಮಿಸಿರುವ ನೂತನ ಧ್ವಜಸ್ಥಂಭವನ್ನು ಗಣರಾಜ್ಯೋತ್ಸವದಂದು ಉದ್ಘಾಟಿಸಿ ಧ್ವಜಾರೋಹಣ ನೆರವೇರಿಸಲಾಯಿತು.v
ಬಳಿಕ ನಡೆದ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿ ಉದ್ಯಮಿಯೂ ಆಗಿರುವ ಚಲನಚಿತ್ರ ವಿತರಕ ಸಚಿನ್ ಎ.ಎಸ್. ಅವರು ಧ್ವಜ ಸ್ಥಂಭ ಉದ್ಘಾಟಿಸಿ ಧ್ವಜಾರೋಹಣ ಮಾಡಿದರು. ಬಳಿಕ ಮಾತನಾಡಿ ಅವರು, ಸಂವಿಧಾನದ ಮಹತ್ವವನ್ನು ತಿಳಿಸಿದರು.

ಇದನ್ನೂ ಓದಿ: ಪುತ್ತೂರು: ರಾಜ್ಯದ ಪ್ರಥಮ ಪಿಪಿಪಿ ಡ್ರೈನೇಜ್ ವ್ಯವಸ್ಥೆ ಮಂಜೂರಾಗುವ ಸಾಧ್ಯತೆ
ಶಾಲಾ ಸಂಚಾಲಕ ಯು.ಜಿ.ರಾಧ ಅವರು ಮಾತನಾಡಿ, ಸಂವಿಧಾನದಲ್ಲಿರುವ ಮೂಲಭೂತ ಹಕ್ಕುಗಳ ಬಗ್ಗೆ ತಿಳಿದುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ, ಶಾಲಾ ಆಡಳಿತ ಮಂಡಳಿಯ ಸದಸ್ಯ ಗುಣಕರ ಅಗ್ನಾಡಿ, ಶಾಲಾ ಮುಖ್ಯಸ್ಥರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಲತಾ ಕುಮಾರಿ ಕಾರ್ಯಕ್ರಮ ನಿರೂಪಿಸಿ ಲಾವಣ್ಯ ವಂದಿಸಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

