Breaking News

ದೀಪಕ್ ಸಾವಿನ ಪ್ರಕರಣ: ಶಿಮ್ಜಿತಾಗೆ ಜಾಮೀನು ನಿರಾಕರಣೆ

ಕೊಚ್ಚಿ: ಕೇರಳ ಮೂಲದ ದೀಪಕ್​ ಸಾವು ಪ್ರಕರಣ ಇಡೀ ದೇಶದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ತಾನು ಮಾಡದ ತಪ್ಪಿಗೆ ಅಮಾಯಕ ದೀಪಕ್​ ಸಾವಿಗೆ ಶರಣಾದನು. ತನ್ನ ವೀವ್ಸ್​ ಹುಚ್ಚಿಗೆ ಮಾನವೀಯತೆಯನ್ನು ಮರೆತು ವರ್ತಿಸಿದ ಆರೋಪಿ ಶಿಮ್ಜಿತಾ ಮುಸ್ತಫಾ ವಿರುದ್ಧ ದೇಶಾದ್ಯಂತ ತೀವ್ರ ಟೀಕೆಗಳು ವ್ಯಕ್ತವಾಯಿತು. ಇದೀಗ ಶಿಮ್ಜಿತಾಗೆ ನ್ಯಾಯಾಲಯದಲ್ಲೂ ತೀವ್ರ ಹಿನ್ನಡೆ ಉಂಟಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ದುರಂತ: ಬೆಂಕಿಯ ತೀವ್ರತೆಯಿಂದ ಒಳಗಿದ್ದವರನ್ನು ಹೊರಗೆಳಯಲಾಗಲಿಲ್ಲ: ಪ್ರತ್ಯಕ್ಷ ದರ್ಶಿ

Advertisement
ಪ್ರಸ್ತುತ ನ್ಯಾಯಾಂಗದ ಬಂಧನದಲ್ಲಿರುವ ಆರೋಪಿ ಶಿಮ್ಜಿತಾ, ಇನ್ನಷ್ಟು ದಿನಗಳ ಕಾಲ ಜೈಲಿನ ಕೋಣೆಯಲ್ಲಿ ಕಾಲ ಕಳೆಯಬೇಕಾಗಿದೆ. ಏಕೆಂದರೆ, ಕುಂದಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆಕೆಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ನ್ಯಾಯಾಲಯವು ಪ್ರಾಸಿಕ್ಯೂಷನ್ ವಾದಗಳನ್ನು ಎತ್ತಿಹಿಡಿದಿದೆ. ಸದ್ಯ ಈ ಪ್ರಕರಣ, ತನಿಖೆಯ ಪ್ರಾಥಮಿಕ ಹಂತದಲ್ಲಿದೆ ಮತ್ತು ಈ ಪರಿಸ್ಥಿತಿಯಲ್ಲಿ ಜಾಮೀನು ನೀಡುವುದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಪ್ರಾಸಿಕ್ಯೂಷನ್ ವಾದಿಸಿತು. ಬಸ್ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರ ಹೇಳಿಕೆಗಳನ್ನು ದಾಖಲಿಸಬೇಕಾಗಿರುವುದರಿಂದ ಆರೋಪಿಗಳನ್ನು ಬಿಡುಗಡೆ ಮಾಡುವುದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪೊಲೀಸ್ ವರದಿಯಲ್ಲಿ ಸೂಚಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ.
ಕೇರಳದ ವಡಕರದ ಮುತ್ತುಂಗಲ್ ಪಶ್ಚಿಮದಲ್ಲಿರುವ ತನ್ನ ಸಹೋದರಿಯ ಮನೆಯಲ್ಲಿದ್ದ ಆರೋಪಿ ಶಿಮ್ಜಿತಾ ಮುಸ್ತಫಾಳನ್ನು ಜನವರಿ 22ರಂದು ಕೇರಳ ಪೊಲೀಸರು ಬಂಧಿಸಿದರು. ಸದ್ಯ ಆಕೆಯನ್ನು ರಿಮಾಂಡ್‌ನಲ್ಲಿ ಇಟ್ಟಿದ್ದಾರೆ. ಇದಕ್ಕೂ ಮುನ್ನ ದೀಪಕ್ ಅವರ ತಾಯಿ, ಶಿಮ್ಜಿತಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದೂರು ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ, ಶಿಮ್ಜಿತಾ ತಲೆಮರೆಸಿಕೊಂಡಿದ್ದಳು.
ಆಕೆಗೆ ವಿದೇಶಿ ಸಂಪರ್ಕಗಳು ಇದ್ದ ಕಾರಣ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಆದರೆ, ವಡಕರದಲ್ಲಿದ್ದಾರೆ ಎಂಬ ಸುಳಿವು ದೊರೆತ ನಂತರ ಆಕೆಯನ್ನು ಬಂಧಿಸಲಾಯಿತು. ಬಳಿಕ, ಕೊಯಿಲಾಂಡಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕುನ್ನಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನಂತರ ಆಕೆಯನ್ನು 14 ದಿನಗಳ ಕಾಲ ಮಂಜೇರಿ ಮಹಿಳಾ ಜೈಲಿಗೆ ಕಳುಹಿಸಲಾಗಿದೆ. ಇದರ ನಡುವೆ ಜಾಮೀನಿಗಾಗಿ ಅರ್ಜಿ ದಾಖಲಿಸಿದ್ದಳು. ಆದರೆ, ಅರ್ಜಿಯನ್ನು ತಿರಸ್ಕರಿಸಲಾಗಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು