ಮುಡಾ ಕೇಸ್: ಸಿಎಂ ಸಿದ್ದರಾಮಯ್ಯಗೆ ಗುಡ್ ನ್ಯೂಸ್

ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸಿ ಸಲ್ಲಿಸಿದ್ದ ಬಿ ರಿಪೋರ್ಟ್‌ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ. ಬಿ ರಿಪೋರ್ಟ್‌ ಪ್ರಶ್ನೆ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಅವರ ಅರ್ಜಿಯನ್ನು ವಜಾ ಮಾಡಿದೆ.

ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ‘ಬಿ’ ರಿಪೋರ್ಟ್‌ಗೆ ಆಕ್ಷೇಪಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಕೆಲ ತಿಂಗಳುಗಳಿಂದ ಕೋರ್ಟ್‌ ಅರ್ಜಿ ವಿಚಾರಣೆ ನಡೆಸಿ ಹಲವು ಸ್ಪಷ್ಟನೆಗಳನ್ನು ಕೇಳಿತ್ತು.

ಇದನ್ನೂ ಓದಿ: ಮಲ್ಲಿಗೆಯ ರಾಶಿಯಲ್ಲಿ ಪೆರುವಾಜೆ ಜಲದುರ್ಗೆ ದೇವಿಯ ನೋಡಿರೇ.. ಫೋಟೋಗಳು ಇಲ್ಲಿವೆ

ಮೈಸೂರಿನ ಕೆಸರೆ ಗ್ರಾಮ ಸರ್ವೆ ನಂ. 464 ರಲ್ಲಿ 3.16 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಕ್ಕೆ ಬದಲಾಗಿ, ಮುಡಾದಿಂದ 14 ಬದಲಿ ನಿವೇಶನಗಳನ್ನು ಪಡೆಯುವ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ, ಭಾವಮೈದ ಬಿ.ಎಂ. ಮಲ್ಲಿಕಾರ್ಜುನ ಸ್ವಾಮಿ ಮತ್ತು ಜಮೀನಿನ ಮೂಲ ಮಾಲೀಕ ದೇವರಾಜು ವಿರುದ್ಧ ಮೈಸೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು.

ತನಿಖೆಯ ಬಳಿಕ, ಬದಲಿ ನಿವೇಶನ ಪಡೆಯುವಲ್ಲಿ ಈ ನಾಲ್ವರು ಯಾವುದೇ ಅಕ್ರಮ ಎಸಗಿರುವ ಬಗ್ಗೆ ಸಾಕ್ಷ್ಯಾಧಾರ ಸಿಕ್ಕಿಲ್ಲ ಎಂದು ಲೋಕಾಯುಕ್ತ ತನಿಖಾಧಿಕಾರಿ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಈ ‘ಬಿ’ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯಕ್ಕೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು