Breaking News

ಮಂಚಿಯಲ್ಲಿ ಎಸ್.ವಿ.ಎಸ್ ಕಾಲೇಜಿನ ಎನ್.ಎಸ್.ಎಸ್. ಶಿಬಿರ ಉದ್ಘಾಟನೆ

ಬಂಟ್ವಾಳ: ವಿದ್ಯಾರ್ಥಿಯು ಕೇವಲ ಅಧ್ಯಯನಕ್ಕೆ ಸೀಮಿತವಾಗಿರದೆ ಸಾಮಾಜಿಕ ಜೀವನದ ಆಗು-ಹೋಗುಗಳ ಬಗ್ಗೆ ಅರಿವಿರಬೇಕು. ಆಗ ಮಾತ್ರ ಅವನು ಸಂಘಜೀವಿಯಾಗಲು ಸಾಧ್ಯ ಎಂದು ಮಂಚಿ – ಕೊಳ್ನಾಡು ಸರಕಾರಿ ಪ್ರೌಢಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಶಿವಶಂಕರ್ ರಾವ್ ಹೇಳಿದರು.

ಇವರು ಬಂಟ್ವಾಳದ ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ 2025-26 ನೇ ಸಾಲಿನ ಎನ್.ಎಸ್.ಎಸ್ ವಾರ್ಷಿಕ ಶಿಬಿರ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವೆಂಕಟರಮಣಸ್ವಾಮಿ ಕಾಲೇಜಿನ ಪ್ರಾಂಶುಪಾಲ ಎಂ.ಡಿ. ಮಂಚಿ, ಯಾವುದೇ ವಿದ್ಯಾರ್ಥಿಗೆ ಶೈಕ್ಷಣಿಕ ಪ್ರಗತಿಯೊಂದಿಗೆ ನೈತಿಕ ಹಾಗೂ ಸಾಮಾಜಿಕ ಪ್ರಗತಿ ಅತಿಮುಖ್ಯ ಅದು ಶಾಲಾ – ಕಾಲೇಜುಗಳಿಗಿಂತ ಈ ರೀತಿಯ ಶಿಬಿರಗಳಿಂದ ದೊರಕುತ್ತದೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿ ಕೊಳ್ನಾಡು – ಸಾಲೆತ್ತೂರಿನ ಲಯನ್ಸ್‌ ಕ್ಲಬ್‌ ಅಧ್ಯಕ್ಷ ಉಮಾನಾಥ್ ರೈ ಮೇರಾವು ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಾಸದ ಜೊತೆಗೆ ಸಾಮಾಜಿಕ ಜೀವನದ ತಿಳುವಳಿಕೆ ಉಂಟಾಗುತ್ತದೆ ಎಂದರು.

ಇದನ್ನೂ ಓದಿ: ಸಾಮಾಜಿಕ ಅರಣ್ಯ ಮರ ಕಟಾವಿಗೆ ಅರಣ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಎನ್.ಎಸ್.ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಯಾವಾಗಲೂ ಕ್ರೀಯಾಶೀಲರಾಗಿರುವಂತೆ ಮಾಡುತ್ತವೆ ಎಂದು ಮಂಚಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮ್‌ ಪ್ರಸಾದ್ ರೈ ತಿರುವಾಜೆ ಹೇಳಿದರು.

ಗ್ರಾಮೀಣ ಜನರ ಜೀವನ ಶೈಲಿಯನ್ನು ತಿಳಿಯಬೇಕಾದುದು ನಗರ ಪ್ರದೇಶದ ವಿದ್ಯಾರ್ಥಿಗಳ ಕರ್ತವ್ಯವಾಗಿದೆ. ಶಿಬಿರದ ಅನುಕೂಲತೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಮಂಚಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುಶೀಲ ಅವರು ಹೇಳಿದರು.

ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವಣ್ಣಪ್ರಭು ಎನ್‌.ಎಸ್.ಎಸ್
ಶಿಬಿರದ ಮಹತ್ವವನ್ನು ತಿಳಿಸಿದರು.

ವೇದಿಕೆಯಲ್ಲಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ತಾರಾನಾಥ ಕೈರಂಗಳ, ಎನ್.ಎಸ್.ಎಸ್. ಘಟಕ ನಾಯಕರಾದ ಕು.ಕರಿಷ್ಮಾ ಮತ್ತು ಅಮಿತ್ ಪ್ರಭು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ. ಕಾಶೀನಾಥ ಶಾಸ್ತ್ರಿ ಸ್ವಾಗತಿಸಿ, ಪ್ರಾಧ್ಯಾಪಕಿ ಕು| ನಿರೀಕ್ಷಾ ವಂದಿಸಿದರು. ಉಪನ್ಯಾಸಕಿ ಕು. ಕಾವ್ಯ ನಿರೂಪಿಸಿದರು. ಕು. ಕರಿಷ್ಮಾ ಮತ್ತು ಸಂಗಡಿಗರು ಪ್ರಾರ್ಥಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು