ನವದೆಹಲಿ: ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 6 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ. ಆರೋಪಿಗಳು 13, 14 ಮತ್ತು 15 ವರ್ಷದವರಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಬಾಲಕಿಯ ಕುಟುಂಬವು ಜನವರಿ 18ರಂದು ದೂರು ದಾಖಲಿಸಿದ್ದು, ತಕ್ಷಣವೇ ತನಿಖೆ ಆರಂಭಿಸಲಾಗಿದೆ. ಮೂವರು ಆರೋಪಿಗಳು ಮತ್ತು ಬಾಲಕಿಯ ಕುಟುಂಬ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಆರೋಪಿಗಳಲ್ಲಿ ಒಬ್ಬರ ತಾಯಿ, ಬಾಲಕಿಯ ಸ್ಥಿತಿಯನ್ನು ಗಮನಿಸಿ ತನ್ನ ಮಗನನ್ನು ತಾನೇ ಪೊಲೀಸರಿಗೆ ಒಪ್ಪಿಸಿದ್ದಾಳೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : Jaipur : ಇನ್ಸ್ಟಾ ಪೋಸ್ಟ್ ನಂತರ ರಾಜಸ್ಥಾನದ ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು, ಏನಾಯ್ತು?
ನನ್ನ ಮಗಳ ಸ್ಥಿತಿ ನೋಡಿ ಆಕೆ (ಆರೋಪಿಯ ತಾಯಿ) ಮಗನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಎಂದು ಬಾಲಕಿಯ ತಾಯಿ ಹೇಳಿದ್ದಾರೆ.ಈ ಪ್ರಕರಣದಲ್ಲಿ ತನಿಖೆ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಭಜನ್‌ಪುರ ನಿವಾಸಿಗಳು ಕಳೆದ ನಾಲ್ಕು ದಿನಗಳಿಂದ ರಸ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ ಆಶಿಷ್ ಮಿಶ್ರಾ ಅವರ ಪ್ರಕಾರ, ಆರೋಪಿತ ಅಪ್ರಾಪ್ತರು ಸ್ಥಳೀಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಮೂವರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣಾ ಕಾಯ್ದೆ (POCSO) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರನ್ನು ಜುವೆನೈಲ್ ಜಸ್ಟಿಸ್ ಬೋರ್ಡ್ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಬಳಿಕ ಹೇಳಿಕೆ ದಾಖಲಿಸಿ ಸಮಾಲೋಚನೆ ಹಾಗೂ ಅಗತ್ಯ ಆರೈಕೆ ನೀಡಲಾಗಿದೆ. ಘಟನೆಯ ಬಳಿಕ ತಕ್ಷಣವೇ ಬಾಲಕಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಅಲ್ಲಿಂದ ಆಸ್ಪತ್ರೆಗೆ ರವಾನಿಸಲಾಗಿದೆ.
ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳನ್ನೂ ಪರಿಶೀಲಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕ್ರೈಂ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

