Breaking News

Breaking: ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಖ್ಯಾತ ಉದ್ಯಮಿ

ಬೆಂಗಳೂರು: ರಿಯಲ್​ ಎಸ್ಟೇಟ್​ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಹೊಸೂರು ರಸ್ತೆಯ ಲ್ಯಾಂಗ್​ಫೋರ್ಡ್ ಟೌನ್​ನಲ್ಲಿರುವ ಕಚೇರಿಯಲ್ಲಿ ನಡೆದಿದೆ. ಸ್ಥಳಕ್ಕೆ ಅಶೋಕ್​​ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನೇಕಲ್​​ನ ನಾರಾಯಣ ಆಸ್ಪತ್ರೆಗೆ ಸಿಜೆ ರಾಯ್ ಶವ ರವಾನಿಸಲಾಗಿದೆ.

ಸಿ.ಜೆ.ರಾಯ್​​ ಅವರು ಕಾನ್ಫಿಡೆಂಟ್ ಗ್ರೂಪ್​ ಎಂಬ ರಿಯಲ್​ ಎಸ್ಟೇಟ್​ ಕಂಪನಿಯನ್ನು ಹುಟ್ಟುಹಾಕಿದ್ದರು. ಪದೇ ಪದೆ ಐಟಿ ಇಲಾಖೆ ಅಧಿಕಾರಿಗಳ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ IT ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

Advertisement

ಇದನ್ನೂ ಓದಿ: Shocking: ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಮಕ್ಕಳು!

ಹೊಸೂರು ರಸ್ತೆಯ ಲ್ಯಾಂಗ್​ಫೋರ್ಡ್ ಟೌನ್​ನಲ್ಲಿರುವ ಕಚೇರಿ ಮೇಲೆ IT ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಕೂಡ ದಾಳಿ ಮಾಡಿದ್ದರು. ಮಧ್ಯಾಹ್ನ ಕಚೇರಿಗೆ ಬಂದಿದ್ದ ಉದ್ಯಮಿ ಸಿ.ಜೆ.ರಾಯ್, ಒಂದು ಗಂಟೆ ಐಟಿ ವಿಚಾರಣೆ ಎದುರಿಸಿದ್ದಾರೆ. ಅಧಿಕಾರಿಗಳಿಗೆ ಕೆಲ ದಾಖಲೆ ಸಹ ಕೊಟ್ಟಿದ್ದಾರೆ. ಮತ್ತಷ್ಟು ದಾಖಲೆ ತರಲು ರೂಂ​ಗೆ ಹೋಗಿದ್ದು, ಈ ವೇಳೆ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಿ.ಜೆ.ರಾಯ್ ಕೊನೆಯುಸಿರೆಳೆದಿದ್ದಾರೆ.

ಖುದ್ದು ಡಿಸಿಪಿ ಅಕ್ಷಯ್​​ ಅವರು ತನಿಖೆ ನಡೆಸಿದ್ದು, ಈಗಾಗಲೇ ಫೈರ್ ಮಾಡಿಕೊಂಡ ಪಿಸ್ತೂಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಕಚೇರಿ ಕೊಠಡಿಯಲ್ಲಿನ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಯಾವುದಾದರೂ ಡೆತ್ ನೋಟ್ ಇದೆಯಾ ಅಥವಾ ಮೊಬೈಲ್​ನಲ್ಲಿ ಏನಾದ್ರೂ ಇದೆಯಾ ಅಥವಾ ಯಾರಿಗಾದ್ರೂ ಮೆಸೇಜ್ ಮಾಡಿದ್ದರಾ ಎಂದು ಎಲ್ಲಾ ಆಯಾಮಗಳಲ್ಲಿ ಪರಿಶೀಲನೆ ಮಾಡಲಾಗುತ್ತಿದೆ.

ಕೇರಳ ಮೂಲದ ಸಾಮಾನ್ಯ ವ್ಯಕ್ತಿಯಾಗಿದ್ದ ಸಿಜೆ ರಾಯ್, 1997ರಲ್ಲಿ ಹೆಚ್​ಪಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ತದನಂತರ ಕಾನ್ಫಿಡೆಂಟ್ ಗ್ರೂಪ್ ಎಂಬ ಸಾಮ್ರಾಜ್ಯ ಕಟ್ಟಿದ್ದೇ ರೋಚಕ. 30,40 ಸೈಟ್​ನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಶುರು ಮಾಡಿ, ಸದ್ಯ 1 ಸಾವಿರ ಎಕರೆ ಭೂಮಿ ಹೊಂದಿದ್ದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು