ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 (T20) ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಆಕರ್ಷಕ ಅರ್ಧಶತಕ ಬಾರಿಸಿದರು. ಇದು ೫ ಪಂದ್ಯಗಳ ಟಿ೨೦ ಸರಣಿಗಳಲ್ಲಿ ಮೂರನೇ ಅರ್ಧಶತಕದವಾಗಿದೆ. ಆ ಮೂಲಕ ವಿರಾಟ್ ಕೊಹ್ಲಿ ಅವರ ಪ್ರಮುಖ ದಾಖಲೆಯನ್ನು ಮುರಿದು ವಿಶ್ವ ದಾಖಲೆಯನ್ನು ನಿರ್ಮಿಸಿದರು.
ಇಶನ್ ಕಿಶನ್ ಜೊತೆ ಶತಕದ ಜೊತೆಯಾಟವಾಡಿದ ಸೂರ್ಯಕುಮಾರ್ ಕೇವಲ 30 ಎಸೆತಗಳಲ್ಲಿ 4 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಸಿಡಿಸಿ ಒಟ್ಟು 63 ರನ್ ಬಾರಿಸಿದರು.

ಈ ಸರಣಿಗೂ ಮುನ್ನ ಸೂರ್ಯಕುಮಾರ್ ಅವರ ಫಾರ್ಮ್ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬಂದಿದ್ದವಾದರೂ ಈ ಸರಣಿಯಲ್ಲಿ ಅದ್ಭುತ ಕಮ್ಬ್ಯಾಕ್ ಮಾಡಿದ್ದಾರೆ. ಒಟ್ಟು ಮೂರು ಪಂದ್ಯಗಳಲ್ಲಿ ಅರ್ಧಶತಕ ಸೇರಿದಂತೆ ಐದು ಪಂದ್ಯಗಳಲ್ಲಿ ಒಟ್ಟು 242 ರನ್ ಗಳಿಸಿದರು. ಇದರೊಂದಿಗೆ, ಒಂದು ಟಿ20 ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ನಾಯಕ ಎಂದೆನಿಸಿಕೊಂಡರು. ಅಲ್ಲದೆ, ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಈ ದಾಖಲೆಯನ್ನು ಸೂರ್ಯಕುಮಾರ್ ಇದೀಗ ತನ್ನದಾಗಿಸಿಕೊಂಡಿದ್ದಾರೆ. 2021 ರಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 231 ರನ್ ಗಳಿಸಿದ್ದರು.
ಇದನ್ನೂ ಓದಿ: T20: ಇಶನ್ ಕಿಶನ್ ಶತಕ, ಸೂರ್ಯಕುಮಾರ್ ಅರ್ಧ ಶತಕ, ಅರ್ಶದೀಪ್ 5 ವಿಕೆಟ್, ಭಾರತಕ್ಕೆ ಸರಣಿ
ಇದೀಗ ಸೂರ್ಯಕುಮಾರ್ 242 ರನ್‌ಗಳನ್ನುಕಲೆ ಹಾಕುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ದಾಖಲೆಯ ಜೊತೆಗೆ ಮತ್ತೊಂದು ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 3,000 ರನ್‌ಗಳನ್ನು ಪೂರೈಸಿದ ವಿಶ್ವದ ಮೊದಲ ಆಟಗಾರ ಎಂದೆನಿಸಿಕೊಂಡರು. 1,822 ಎಸೆತಗಳಲ್ಲಿ 3,000 ಟಿ20 ರನ್‌ಗಳನ್ನು ಪೂರ್ಣಗೊಳಿಸಿದರು. ಈ ಹಿಂದೆ, ಈ ದಾಖಲೆ ಯುಎಇಯ ಮೊಹಮ್ಮದ್ ವಾಸಿಮ್ ಹೆಸರಿನಲ್ಲಿತ್ತು. ಅವರು 1,947 ಎಸೆತಗಳಲ್ಲಿ 3,000 ಟಿ20 ರನ್‌ಗಳನ್ನು ಬಾರಿಸಿದ್ದರು.
ಸೂರ್ಯಕುಮಾರ್ ಯಾದವ್ ಹೊರತುಪಡಿಸಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮಾತ್ರ ಭಾರತ ಪರ 3000 ಟಿ20 ಅಂತಾರಾಷ್ಟ್ರೀಯ ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ 2149 ಎಸೆತಗಳಲ್ಲಿ ಈ ಸಾಧನೆ ಮಾಡಿದರೆ, ವಿರಾಟ್ ಕೊಹ್ಲಿ 2169 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಸೂರ್ಯಕುಮಾರ್ ಯಾದವ್ ಈ ಸರಣಿಯಲ್ಲಿ ಕ್ರಮವಾಗಿ 32 ರನ್, ಎರಡನೇ ಪಂದ್ಯದಲ್ಲಿ ಅಜೇಯ 82 ರನ್, ಮೂರನೇ ಪಂದ್ಯದಲ್ಲೂ ಅಜೇಯ 57 ರನ್, ನಾಲ್ಕನೇ ಪಂದ್ಯದಲ್ಲಿ ಕೇವಲ 8 ರನ್, ಇದೀಗ ಐದನೇ ಪಂದ್ಯದಲ್ಲಿ 63 ರನ್ ಬಾರಿಸಿದರು. ಸೂರ್ಯಕುಮಾರ್ ಯಾದವ್ ಈ ಸರಣಿಯಲ್ಲಿ ಒಟ್ಟು 25 ಬೌಂಡರಿಗಳು ಮತ್ತು 14 ಸಿಕ್ಸರ್ಗಳನ್ನು ಬಾರಿಸಿದ್ದಾರೆ.
ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

