Breaking News

Puttur : ಸದೃಢ ಸಮಾಜಕ್ಕೆ ಸಂಘಟಿತ ಯುವಶಕ್ತಿ ಅಗತ್ಯ : ರಾಧಾಕೃಷ್ಣ ಬೋರ್ಕರ್

ಪುತ್ತೂರು : ಸಮಾಜದ ಯುವಶಕ್ತಿ ಇಂದು ಸಂಘಟಿತವಾಗಿ ಸದೃಢವಾದ ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗುವ ಅಗತ್ಯವಿದೆ ಎಂದು ಪುತ್ತೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಹೇಳಿದರು.

ಪುತ್ತೂರಿನ ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ಯುವ ಸಂಘಟನೆ ಶ್ರೀ ಸರಸ್ವತಿ ವಿದ್ಯಾರ್ಥಿ ಸಂಘ 2026ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಾಗಾಲೋಟದಲ್ಲಿ ಓಡುತ್ತಿರುವ ಡಿಜಿಟಲ್ ಯುಗ ಇಂದು ಯುವಕರನ್ನು, ವಿದ್ಯಾರ್ಥಿಗಳನ್ನು ಸಮಾಜದಿಂದ ವಿಮುಖಗೊಳಿಸುತ್ತಿರುವುದು ತೀವ್ರ ಕಳವಳಕಾರಿ ಅಂಶ. ಇಂತಹ ಸಂದರ್ಭದಲ್ಲಿ ಸಮಾಜದ ಸದೃಢತೆಗೆ ವಿದ್ಯಾರ್ಥಿಗಳು ಸಂಘಟಿತರಾಗಿ, ಸಮಾಜದ ಏಳಿಗೆಗೆ ತಮ್ಮ ಕೊಡುಗೆ ನೀಡುವುದು ಅತ್ಯಂತ ಅಗತ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ತಮ್ಮ ಕೊಡುಗೆಯನ್ನು ನೀಡುತ್ತಿವೆ ಎಂದರು.

Advertisement

ವಿದ್ಯಾರ್ಥಿ ಸಂಘ ಉದ್ಘಾಟಿಸಿದ ನಿವೃತ್ತ ಜಿಲ್ಲಾ ಅರಣ್ಯ ಅಧಿಕಾರಿ ಪುರುಷೋತ್ತಮ ಪ್ರಭು ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ದೊರಕುವ ಎಲ್ಲ ರೀತಿಯ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು ಶೈಕ್ಷಣಿಕವಾಗಿ ಸಾಮಾಜಿಕವಾಗಿ ಉನ್ನತಿಯತ್ತ ಮುಂದುವರಿಯುವಲ್ಲಿ ಗಮನ ನೀಡಬೇಕು. ಅಲ್ಲದೆ ಯಾವುದೇ ಮಾದಕ ದ್ರವ್ಯ ಸೇವನೆಗೆ ದಾಸರಾಗುವುದಾಗಲಿ ಮಾಡಬಾರದು ಎಂದು ಕಿವಿ ಮಾತು ಹೇಳಿದರು.

ಇದನ್ನೂ ಓದಿ : Sullia : ಅರಂತೋಡಿನಲ್ಲಿ 1 ತಿಂಗಳಿನಿಂದ ಬೀಡುಬಿಟ್ಟ ಗಜಪಡೆ: ಅಪಾರ ಬೆಳೆ ನಾಶ

ನೂತನ ಪದಾಧಿಕಾರಿಗಳ ಪ್ರಮಾಣ ವಚನ

ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಸುಜಯ್ ಬಿ ಎಸ್, ಉಪಾಧ್ಯಕ್ಷರಾಗಿ ವಿದ್ಯಾ, ಕಾರ್ಯದರ್ಶಿಯಾಗಿ ದೇವಿಪ್ರಣಮ್ಯ, ಜೊತೆ ಕಾರ್ಯದರ್ಶಿಯಾಗಿ ವಿಕಾಸ್ ಎಂ ಆರ್ ಹಾಗೂ ಸುಷ್ಮಾ, ಸಂಘಟನಾ ಕಾರ್ಯದರ್ಶಿಯಾಗಿ ಪ್ರತೀಕ್ಷಾ, ಕೋಶಾಧಿಕಾರಿಯಾಗಿ ತನುಶ್ರೀ ಪ್ರಮಾಣವಚನ ಸ್ವೀಕರಿಸಿದರು.

ಭಾಲವಲೀಕಾರ್ ಗೌಡ ಸರಸ್ವತ ಬ್ರಾಹ್ಮಣ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು ಕುಂಟಿನಿ ಅವರು ಪ್ರಮಾಣವಚನ ಬೋಧಿಸಿ ಶುಭಹಾರೈಸಿದರು.

ಸಭಾಧ್ಯಕ್ಷತೆಯನ್ನು ವಹಿಸಿದ ಸಂಘದ ಉಪಾಧ್ಯಕ್ಷರೂ ಆಗಿರುವ ನಿವೃತ್ತ ಶಿಕ್ಷಕ ಬಾಲಕೃಷ್ಣ ನಾಯಕ್ ತೆಂಕಿಲ ಮಾತನಾಡಿ, ಶತಮಾನದ ಇತಿಹಾಸವುಳ್ಳ ಪುತ್ತೂರು ಭಾಲಾವಲೀಕಾರ್ ಗೌಡ ಸಾರಸ್ವರ ಬ್ರಾಹ್ಮಣ ಸೇವಾ ಸಂಘವು ಸ್ವ ಸಮಾಜದ ವಿದ್ಯಾರ್ಥಿಗಳ ಬೆಳವಣಿಗೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ ತರಬೇತಿ ಕಾರ್ಯಕ್ರಮಗಳು, ಕ್ರೀಡಾಕೂಟ ಅಲ್ಲದೆ ಇನ್ನಿತರ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.

ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ರಮೇಶ್ ಪ್ರಭು, ಟ್ರಸ್ಟ್ ನ ಬಿಪಿನ್ ಚಂದ್ರ ವಾಗ್ಲೆ ಅವರು ಮಾತನಾಡಿ ಶುಭ ಹಾರೈಸಿದರು.

ಸಭಾ ಕಾರ್ಯಕ್ರಮದ ನಂತರ ಜರುಗಿದ ಸಾರಸ್ವತ ಸಮಾಜ -ಆಶಯ, ಸವಾಲುಗಳು ಮತ್ತು ಭವಿಷ್ಯ ಎಂಬ ವಿಚಾರವಾಗಿ ಯುವ ಸಂವಾದ ಕಾರ್ಯಕ್ರಮ ನಡೆಯಿತು. ನ್ಯಾಯವಾದಿ ಕೃಷ್ಣಪ್ರಸಾದ್ ನಡ್ಸಾರ್ ಕಾರ್ಯಕ್ರಮ ನಡೆಸಿಕೊಟ್ಟರು.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

 

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು