Breaking News

ಟಿ20 ವಿಶ್ವಕಪ್: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿದ ಪಾಕಿಸ್ತಾನ

ಇದೇ ತಿಂಗಳು ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಲೀಗ್ ಹಂತದಲ್ಲಿ ಭಾರತ ತಂಡದ ವಿರುದ್ಧದ ಪಂದ್ಯವನ್ನು (ಫೆ.15) ಬಹಿಷ್ಕರಿಸುವುದಾಗಿ ಪಾಕಿಸ್ತಾನ ಘೋಷಿಸಿದೆ.

ಇದೇ 7ರಂದು ಆರಂಭವಾಗುವ ಟೂರ್ನಿಯ ವೇಳಾಪಟ್ಟಿಯ ಪ್ರಕಾರ ಭಾರತ- ಪಾಕ್ ತಂಡಗಳ ನಡುವಣ ಪಂದ್ಯವು ಕೊಲಂಬೊದಲ್ಲಿ ಆಯೋಜನೆ ಗೊಂಡಿದೆ. ಆದರೆ ಬಾಂಗ್ಲಾದೇಶ ತಂಡವನ್ನು ವಿಶ್ವಕಪ್ ಟೂರ್ನಿಯಿಂದ ಹೊರಹಾಕಿದ್ದನ್ನು ವಿರೋಧಿಸಿ ಪಾಕಿಸ್ತಾನವು ಪಂದ್ಯ ಬಹಿಷ್ಕರಿಸಿದೆ ಎಂದು ವರದಿಯಾಗಿದೆ.

Advertisement

ಇದನ್ನೂ ಓದಿ: Puttur : ಸದೃಢ ಸಮಾಜಕ್ಕೆ ಸಂಘಟಿತ ಯುವಶಕ್ತಿ ಅಗತ್ಯ : ರಾಧಾಕೃಷ್ಣ ಬೋರ್ಕರ್

ಪಾಕ್ ಸರ್ಕಾರವು ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಪ್ರಕಟಣೆಯಲ್ಲಿ, ‘ಕ್ರಿಕೆಟ್ ತಂಡಕ್ಕೆ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಅನುಮತಿ ನೀಡಲಾಗಿದೆ. ಆದರೆ ಫೆಬ್ರುವರಿ 15ರಂದು ಕೊಲಂಬೊದಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯಬಾರದು’ ಎಂದು ಉಲ್ಲೇಖಿಸಿದೆ.

ಇದರಿಂದಾಗಿ ಭಾರತ ತಂಡಕ್ಕೆ ಪೂರ್ಣ ಅಂಕಗಳು ದೊರೆಯಲಿವೆ. ಅಲ್ಲದೇ ಪಂದ್ಯ ಬಹಿಷ್ಕರಿಸಿರುವ ಪಾಕಿಸ್ತಾನ ತಂಡಕ್ಕೆ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಪಾಕ್ ತಂಡವು ಫೆ. 7ರಂದು ನಡೆಯುವ ಮೊದಲ ಪಂದ್ಯದಲ್ಲಿ ನೆದರ್ಲೆಂಡ್ಸ್ 10ರಂದು ಅಮೆರಿಕ ಮತ್ತು 18ರಂದು ನಮೀಬಿಯಾ ವಿರುದ್ಧ ಕೊಲಂಬೊದಲ್ಲಿಯೇ ಆಡಲಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು