Breaking News

Shocking: ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್‌ನಲ್ಲಿ ಇದ್ದ ಬಾಲಕಿ!!

ಮಧ್ಯಪ್ರದೇಶ: ಹಾಸ್ಟೆಲ್‌ನಲ್ಲಿ ಇದ್ದ 13 ವರ್ಷದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ‌.

ಮಧ್ಯ ಪ್ರದೇಶದ ಬಾಲಘಾಟ್​​ನ ಸರ್ಕಾರಿ ಹಾಸ್ಟೆಲ್‌ನಲ್ಲಿ 8ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಹಾಸ್ಟೇಲ್‌ಗೆ ತರಕಾರಿ ಹಾಕುವ ಅಲ್ತಾಫ್ ಎಂಬ ಕಾಮುಕ ಅತ್ಯಾಚಾರ ಎಸಗಿದ್ದಾನೆ. ಹಲವು ತಿಂಗಳುಗಳ ಕಾಲ ದೌರ್ಜನ್ಯ ನಡೆಸಿದ ಕಾಮುಕನಿಂದ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ.

Advertisement

ಇದನ್ನೂ ಓದಿಕಾಲುಗಳನ್ನು ಕತ್ತರಿಸಿದವರಿಂದ ಪ್ರಜಾಪ್ರಭುತ್ವದ ಪಾಠ: ಸಿಪಿಐ(ಎಂ) ವಿರುದ್ಧ ಸದಾನಂದನ್ ಮಾಸ್ಟರ್ ವಾಗ್ದಾಳಿ

ಹಾಸ್ಟೆಲ್​ನಲ್ಲಿ ಓದುತ್ತಿದ್ದ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಆದರೆ, ಆಕೆ ಈ ಬಗ್ಗೆ ಯಾರಲ್ಲೂ ಹೇಳಿಕೊಂಡಿರಲಿಲ್ಲ. ಆರೋಪಿ ಸುಮಾರು 4 ತಿಂಗಳ ಕಾಲ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡುತ್ತಲೇ ಇದ್ದ. ಆತ ಆಕೆಗೆ ಕೊಲೆ ಬೆದರಿಕೆ ಹಾಕುತ್ತಿದ್ದ. ಇತ್ತೀಚೆಗೆ ಆ ಬಾಲಕಿಯ ಆರೋಗ್ಯ ಹದಗೆಟ್ಟಾಗ ಆಕೆಯನ್ನು ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ತಪಾಸಣೆ ಮಾಡಿದಾಗ ಆಕೆ 5 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿತ್ತು. ಈ ಘಟನೆಯು ಖುರೈನಲ್ಲಿರುವ ಬುಡಕಟ್ಟು ಸರ್ಕಾರಿ ಹಾಸ್ಟೆಲ್‌ನಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಭೋಪಾಲ್‌ನ ಹಮೀದಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆ ಬಾಲಕಿ 2 ವರ್ಷಗಳಿಂದ ಹಾಸ್ಟೆಲ್​ನಲ್ಲಿ ವಾಸವಾಗಿದ್ದಳು. ಅಲ್ತಾಫ್ ಎಂಬ ಯುವಕ ಹಾಸ್ಟೆಲ್‌ಗೆ ತರಕಾರಿ ನೀಡಲು ಬರುತ್ತಿದ್ದ. ಸೆಪ್ಟೆಂಬರ್ 2025ರಲ್ಲಿ ಆತ ಆ ವಿದ್ಯಾರ್ಥಿನಿಯ ಕೋಣೆಗೆ ಬಲವಂತವಾಗಿ ನುಗ್ಗಿ ಬಾಗಿಲು ಮುಚ್ಚಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದ. ಆಕೆ ವಿರೋಧಿಸಿದಾಗ, ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.

ಭಯಗೊಂಡ ವಿದ್ಯಾರ್ಥಿನಿ ಈ ಬಗ್ಗೆ ಯಾರಿಗೂ ಹೇಳಲಿಲ್ಲ. ನಂತರ, ಆರೋಪಿಗೆ ಅವಕಾಶ ಸಿಕ್ಕಾಗಲೆಲ್ಲಾ ಆಕೆಯ ಮೇಲೆ ಅತ್ಯಾಚಾರ ಮಾಡುತ್ತಲೇ ಇದ್ದ. ಆ ವಿದ್ಯಾರ್ಥಿನಿಗೆ ಹೊಟ್ಟೆ ನೋವು ಕಾಣಿಸಿಕೊಂಡಾಗ, ಅವಳು ವಾರ್ಡನ್ ಮತ್ತು ಕಾವಲುಗಾರನಿಗೆ ಮಾಹಿತಿ ನೀಡಿದ್ದಳು. ಆ ವಾರ್ಡನ್ ವಿದ್ಯಾರ್ಥಿನಿಯ ಪೋಷಕರಿಗೆ ಕರೆ ಮಾಡಿದ್ದರು. ಕುಟುಂಬದ ಸದಸ್ಯರು ಆಕೆಯನ್ನು ಭೋಪಾಲ್‌ನ ಹಮೀದಿಯಾ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಪರೀಕ್ಷೆಯ ಸಮಯದಲ್ಲಿ ವೈದ್ಯರು ಆಕೆ ಗರ್ಭಿಣಿ ಎಂದು ಬಹಿರಂಗಪಡಿಸಿದ್ದರು.

ಈ ಘಟನೆ ವರದಿಯಾದ ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಬಾಲಕಿಯ ಹೇಳಿಕೆಯ ಆಧಾರದ ಮೇಲೆ, ಪೊಲೀಸರು ಆ ಗ್ರಾಮದ ಯುವಕನನ್ನು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು