Breaking: ಧಾರವಾಡದ ಕೋಳಿಕೆರೆ ಬಡಾವಣೆಯಲ್ಲಿ ಸಿಲಿಂಡರ್ ಸ್ಫೋಟ: ಆರು ಮಂದಿ ಗಂಭೀರ

ಧಾರವಾಡ: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದ ಕೋಳಿಕೆರೆ ಬಡಾವಣೆಯಲ್ಲಿ ನಡೆದಿದೆ.
ಇಸ್ಮಾಯಿಲ್ ಎಂಬವರ ಮನೆಯಲ್ಲಿ ಈ ಸಿಲಿಂಡರ್ ಸ್ಫೋಟ ಸಂಭವಿಸಿ ಬೆಂಕಿ ಧಗಧಗಿಸಿದೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ವಿದ್ಯಾಗಿರಿ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮನೆ ಗೋಡೆಗಳಿಗೆ ಹಾನಿ

ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯ ಗೋಡೆಗಳು ಪುಡಿ ಪುಡಿಯಾಗಿದ್ದು, ಗೃಹೋಪಯೋಗಿ ವಸ್ತುಗಳೂ ಹಾನಿಯಾಗಿವೆ.

News Source : G1 news

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು