Breaking News

ಪತಿಯ ಮೇಲೇರಿ ಭೀಕರವಾಗಿ ಹಲ್ಲೆ ನಡೆಸಿದ ಪತ್ನಿ: ವಿಡಿಯೋ ವೈರಲ್

ಮಧ್ಯಪ್ರದೇಶದ ಸತ್ನಾದ ಪತ್ನಿ ಪತಿಯ ಮೇಲೆ ಹಲ್ಲೆ ಮಾಡಿರುವ ವಿಡಿಯೋವೊಂದು ವೈರಲ್​​ ಆಗಿದೆ. ಗಂಡನ ಮೇಲೆ ಅವನ ಹೆಂಡತಿ ದೈಹಿಕವಾಗಿ ಹಲ್ಲೆ ನಡೆಸಿದ್ದಾಳೆ ಎಂದು ಹೇಳಲಾಗಿರುವ ವಿಡಿಯೋ ಸೋಶಿಯಲ್​​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋವನ್ನು @GharKeKalesh ಎಂಬ ಎಕ್ಸ್​​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವ್ಯಕ್ತಿ ದೈಹಿಕ ಮತ್ತು ಮಾನಸಿಕ ಕಿರುಕುಳವನ್ನು ಅನುಭವಿಸುತ್ತಿದ್ದ. ತಾನು ಪ್ರತಿದಿನ ಅನುಭವಿಸುವ ಹಿಂಸೆಯನ್ನು ಸಮಾಜಕ್ಕೆ ತಿಳಿಸಬೇಕು ಎಂದು ಗುಪ್ತವಾಗಿ ವಿಡಿಯೋ ರೆಕಾರ್ಡ್​​ ಮಾಡಿದ್ದಾನೆ.

ಈ ದೃಶ್ಯಾವಳಿಯನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡ ನಂತರ ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ಬಗ್ಗೆ ನೆಟ್ಟಿಗರು ಅಕ್ರೋಶ ಕೂಡ ವ್ಯಕ್ತಪಡಿಸಿದ್ದಾರೆ. ಪನ್ನಾ ಪೊಲೀಸ್ ವರಿಷ್ಠಾಧಿಕಾರಿಗೆ ದೃಶ್ಯಾವಳಿಗಳನ್ನು ನೀಡಿ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ. ವೀಡಿಯೊದ ವೈರಲ್ ಆಗಿರುವ ಕಾರಣ ಪತಿಗೆ ರಕ್ಷಣೆಯನ್ನು ಕೂಡ ನೀಡಲಾಗಿದೆ. ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣಾ ಕಾಯ್ದೆ (2005) ಇದೆ. ಆದರೆ ಪುರುಷರಿಗೆ ಅದರ ನಿಬಂಧನೆಗಳ ಅಡಿಯಲ್ಲಿ ರಕ್ಷಣೆಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ.

Advertisement

ಇದನ್ನೂ ಓದಿ: ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಜತೆಗೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ ವ್ಯಕ್ತಿಯ ಕೊಲೆ

ಇಲ್ಲಿದೆ ನೋಡಿ ವಿಡಿಯೋ:

ದೌರ್ಜನ್ಯ ಎದುರಿಸುತ್ತಿರುವ ಪುರುಷರು ವಿಚ್ಛೇದನ ನೀಡಿದ್ರೆ ಅದು ಅವರ ಮೇಲೆಯೇ ಪರಿಣಾಮ ಬೀರುವುದು. ಕ್ರಿಮಿನಲ್ ಬೆದರಿಕೆ, ಕ್ರೌರ್ಯಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆ (ಐಪಿಸಿ) ಅಥವಾ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ದೂರು ದಾಖಲಿಸಲಾಗುವುದು. ನಿರ್ದಿಷ್ಟ ಕಾನೂನು ಚೌಕಟ್ಟುಗಳ ಕೊರತೆಯಿಂದಾಗಿ ಪುರುಷ ಇಂತಹ ಅನ್ಯಾಯಗಳನ್ನು ಅನುಭವಿಸುತ್ತಿದ್ದಾರೆ. ಸುಳ್ಳು ವರದಕ್ಷಿಣೆ ಪ್ರಕರಣಗಳು ಪುರುಷರಿಗೆ ದೊಡ್ಡ ಸಮಸ್ಯೆಯಾಗಿದೆ. ಆ ಕಾರಣಕ್ಕೆ ಅವರು ಭಯದಿಂದ ಎಲ್ಲದಕ್ಕೂ ಒಪ್ಪಿಕೊಂಡು ಸಂಸಾರ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು