ಉಡುಪಿ: ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬೀಡಿನಗದ್ದೆ ನಿವಾಸಿ ಯುವರಾಜ್ ಮೃತ ದುರ್ದೈವಿ.
ನಸುಕಿನ ವೇಳೆ 2:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಮೃತದೇಹವನ್ನು ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲಾಗಿದ್ದು, ಶವಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

