ರಕ್ಕಸಪುರದೋಳ್ ಪ್ರೀಮಿಯರ್ ಶೋಗೆ ಜನರ ಮೆಚ್ಚುಗೆ

ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯವರು ನಾಯಕನಾಗಿ ನಟಿಸಿರುವ ‘ರಕ್ಕಸಪುರದೋಳ್’ ಸಿನಿಮಾ ನಾಳೆ (ಫೆ.06) ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಮೈಸೂರಿನಲ್ಲಿ ನಡೆದ ಪ್ರೀಮಿಯರ್ ಶೋಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಜೊತೆಗೆ ಈಗಾಗಲೇ ಬುಕ್ ಮೈ ಶೋ ಆ್ಯಪ್‌ನಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿದ್ದು, ಈ ಬಗ್ಗೆ ಖುದ್ದು ನಟ ರಾಜ್ ಬಿ ಶೆಟ್ಟಿ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Puttur: ಡ್ರಾಯಿಂಗ್ ಗ್ರೇಡ್ ಪರೀಕ್ಷೆ; ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗೆ ವಿಶಿಷ್ಟ ಶ್ರೇಣಿ

Advertisement

ಈ ಕುರಿತು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಲೈವ್‌ಗೆ ಬಂದು ಮೊದಲ ಪ್ರೀಮಿಯರ್ ಶೋಗೆ ಪ್ರೇಕ್ಷಕರಿಂದ ಬರುತ್ತಿರುವ ರೆಸ್ಪಾನ್ಸ್ ಬಗ್ಗೆ ಮಾತನಾಡಿದ್ದಾರೆ. ‘ನೀವೆಲ್ಲಾ ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ ಬಳಿಕ ನಮಗೆ ಕೆಲಸ ಶುರುವಾಗುತ್ತದೆ. ನನ್ನ ಮೊದಲ ಸಿನಿಮಾದ ಪ್ರೀಮಿಯರ್ ಅಮೆರಿಕದಲ್ಲಿ ಬಿಡುಗಡೆಯಾಗಿತ್ತು.

ಅಂದು ಅಷ್ಟೊಂದು ಖುಷಿಯಾಗಿರಲಿಲ್ಲ. ಮೊಟ್ಟ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ರವಿ ಸಾರಂಗ ಅವರು ನಿಮ್ಮನ್ನ ಯಾವತ್ತು ಮರಿಯೋದಿಲ್ಲ. ನಮ್ಮ ಸಿನಿಮಾದಲ್ಲಿ ನಟಿಸಿರುವ ಬಗ್ಗೆ ನೀವು ಕೊಡುತ್ತಿರುವ ಪ್ರತಿಕ್ರಿಯೆ ತುಂಬಾ ಖುಷಿ ಕೊಟ್ಟಿದೆ. ಬೆಂಗಳೂರಿನಲ್ಲಿ ನಮ್ಮ ಸಿನಿಮಾ ನೋಡಿ ಬೈದಿರುವ ಎಲ್ಲರಿಗೂ ಧನ್ಯವಾದಗಳು’ ಎಂದಿದ್ದಾರೆ.

Advertisement

2026ರ ಫೆಬ್ರುವರಿ 6ರಂದು ರಕ್ಕಸಪುರದೋಳ್ ಸಿನಿಮಾ ತೆರೆ ಕಾಣಲಿದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ವಿಲಿಯಂ ಡೇವಿಡ್ ಛಾಯಾಚಿತ್ರಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನವಿದೆ. ಸ್ವತಿಷ್ಠ ಕೃಷ್ಣನ್, ಗೋಪಾಲಕೃಷ್ಣ ದೇಶಪಾಂಡೆ, ಬಿ.ಸುರೇಶ್, ಅರ್ಚನಾ ಕೊಟ್ಟಿಗೆ ಮುಂತಾದವರು ಚಿತ್ರದಲ್ಲಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು