Breaking News

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು

ಗದಗ: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ.

ಇದನ್ನೂ ಓದಿಫ್ಲೋರಿಡಾ ಗಾಲ್ಫ್​ ಕೋರ್ಸ್​​ನಲ್ಲಿ ಟ್ರಂಪ್ ಹತ್ಯೆಗೆ ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

Advertisement

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸ್ಥಳಕ್ಕೆ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ಯಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು