Breaking News

ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣಗಳು ಬಹಿರಂಗ: ಆರ್. ಅಶೋಕ್

ಬೆಂಗಳೂರು: ವಿಧಾನಸಭಾ ವಿಶೇಷ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಹಗರಣಗಳನ್ನು ಪ್ರತಿಪಕ್ಷಗಳು ಬಹಿರಂಗಪಡಿಸಿವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೇ ಕಾಂಗ್ರೆಸ್ ಸರ್ಕಾರ ಹಗರಣಗಳ ಜಾಲದಲ್ಲಿ ಸಿಲುಕಿದೆ ಎಂದು ಆರೋಪಿಸಿದರು.

Advertisement

ಇದನ್ನೂ ಓದಿ: T20 Worldcup: ಭಾರತ ತಂಡಕ್ಕೆ ಆಘಾತ, ಹರ್ಷಿತ್ ರಾಣಾ ಔಟ್, ಸಿರಾಜ್ ಇನ್!

ಈಗಾಗಲೇ ಹಲವು ಹಗರಣಗಳ ಆರೋಪ ಎದುರಿಸುತ್ತಿರುವ ಸರ್ಕಾರದ ಪಟ್ಟಿಗೆ ಅಬಕಾರಿ ಇಲಾಖೆಯಲ್ಲಿ ರೂ.6,000 ಕೋಟಿಗೂ ಅಧಿಕ ಲೂಟಿ ಎಂಬ ಹೊಸ ಹಗರಣ ಸೇರ್ಪಡೆಯಾಗಿದೆ. ಸರ್ಕಾರದ ಖಜಾನೆ ಖಾಲಿಯಾಗಿದ್ದು, VB G–RAM–G ಯೋಜನೆ ಜಾರಿಗೆ ಅಗತ್ಯವಿರುವ ಶೇ.40ರಷ್ಟು ರಾಜ್ಯದ ಪಾಲಿನ ಹಣವನ್ನು ನೀಡಲು ಸರ್ಕಾರ ಅಸಮರ್ಥವಾಗಿದೆ.ಇದೇ ಕಾರಣಕ್ಕೆ ಹೊಸ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಆರೋಪಿಸಿದರು.

ಅಕ್ರಮಗಳನ್ನು ನಡೆಸಲು ಅವಕಾಶ ಇರುವುದಿಲ್ಲ ಎಂಬ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಕೇಂದ್ರದ ಮೇಲೆ ಆರೋಪಗಳನ್ನು ಮಾಡುತ್ತಿದೆ. ಹೊಸ ಕಾಯ್ದೆಗೆ ವಿರೋಧಿಸುತ್ತಿದೆ ಎಂದು ಹೇಳಿದರು.

ಕಳೆದ ಎರಡೂವರೆ ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರದ ಏಕೈಕ ಸಾಧನೆ ಎಂದರೆ ಹಗರಣ ನಡೆಸಿರುವುದು. ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸುವ ಮೂಲಕ ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ನಡೆಯುತ್ತಿದೆ. ಆದರೆ, ಬಿಜೆಪಿ ಶಾಸಕರು ಸತ್ಯಾಂಶಗಳನ್ನು ಜನರ ಮುಂದಿಟ್ಟಿದ್ದಾರೆ ಎಂದು ತಿಳಿಸಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು