ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ 2025-26ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಜ.29 ರಂದು ಪ್ರಾರಂಭಗೊಂಡು ಫೆ.4 ರಂದು ಸಮಾರೋಪಗೊಂಡಿತು.
ಬೊಳ್ಳಾಯಿ ನಗ್ರಿಯ ಶಾರದಾ ಭಜನಾಮಂದಿರದ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಕ್ಯಾಂಪ್ಕೋ ಪುತ್ತೂರು ವಿಭಾಗದ ಅಧ್ಯಕ್ಷ ಸಹಕಾರ ರತ್ನ ಎಸ್.ಆರ್.ಸತೀಶ್ಚಂದ್ರ ಅವರು ಮಾತನಾಡಿದರು.

ಇದನ್ನೂ ಓದಿ: ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ನೆರವು ಕಡಿಮೆ: ಭಾಗೀರಥಿ ಮುರುಳ್ಯ
ಕಾಲೇಜು ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಸಮಾರೋಪ ಭಾಷಣ ಮಾಡುತ್ತಾ, ಶಿಬಿರದಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳೂ ತಮ್ಮ ಜೀವನದಲ್ಲಿ ರಾಷ್ಟ್ರಹಿತ ಚಿಂತನೆ ನಡೆಸುತ್ತಾ ಸಮಾಜದಲ್ಲಿ ತಮ್ಮ ಪಾತ್ರದ ಕುರಿತು ಸದಾ ಜಾಗೃತರಾಗಿರಬೇಕು. ಎನ್‌ಎಸ್‌ಎಸ್ ಶಿಬಿರವು ಈ ನಿಟ್ಟಿನಲ್ಲಿ ದಿಕ್ಸೂಚಿಯಾಗಿದೆ ಎಂದು ಹೇಳಿದರು.
ಲಯನ್ ರಮೇಶ್, ಸಜಿಪದ ಉದ್ಯಮಿ ಶ್ರೀಕಾಂತ್ ಶೆಟ್ಟಿ, ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯೆ ಲಕ್ಷ್ಮೀ ರಘುರಾಜ್, ಸಹ ಸಂಯೋಜನಾಧಿಕಾರಿ ದೀಕ್ಷಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ವಿನುತಾ ಲಕ್ಷ್ಮೀ ಶಿಬಿರದ ಚಟುವಟಿಕೆಗಳ ವರದಿ ವಾಚಿಸಿದರು. ವಿದ್ಯಾರ್ಥಿನಿಯರಾದ ಕು. ಮಾನಸಾ ಸ್ವಾಗತಿಸಿ, ಕು.ನಿರೀಕ್ಷಾ ವಂದಿಸಿದರು. ಕು. ಕವನಾ ಕಾರ್ಯಕ್ರಮ ನಿರ್ವಹಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ–ಮೇಲ್- g1newsdpt@gmail.com

