ಪುತ್ತೂರು: ಚಲಿಸುತ್ತಿದ್ದ ರೈಲಿನಿಂದ ಹೊರಗೆ ಬಿದ್ದು ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಸಾವನ್ನಪ್ಪಿರುವ ಘಟನೆ ಮಂಗಳವಾರ ಮುಂಜಾನೆ ಚನ್ನರಾಯಪಟ್ಟಣದ ಬಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ನಿವಾಸಿ ನಿಶಿತ್ ನಾಯ್ಕ್ (25) ಮೃತ ದುರ್ದೈವಿ.
ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್’ನಲ್ಲಿ ಉದ್ಯೋಗಿಯಾಗಿರುವ ನಿಶಿತ್ ಅವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ. ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ: Video: ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರ ಬಂಧನ
ಮನೆಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ಟ್ರೈನ್ ಹಿಡಿದಿದ್ದರು. ಜನರಲ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಅವರು, ಸುಮಾರು 2.30ರ ಹೊತ್ತಿಗೆ ರೈಲಿನಿಂದ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತದೇಹ ಹಾಸನ ರೈಲ್ವೇ ಪೊಲೀಸರ ಸುಪರ್ಧಿಯಲ್ಲಿದೆ ಎಂದು ಹೇಳಲಾಗಿದೆ. ಮೃತರ ತಂದೆ ನಿವೃತ್ತ ಸೈನಿಕರಾಗಿದ್ದು, ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.
ದೇವಿನಗರ ಶಾಲಾ ವ್ಯಾಪ್ತಿಯ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

