Breaking News

ಕಾಲೇಜು ಕ್ಯಾಪಂಸ್‌‌‌ನಲ್ಲಿ ಮರಗಿಡ ಇಲ್ದೇ ಇದ್ರೆ ದಂಡ!

ಇಂದೋರ್: ಪರಿಸರ ಸಂರಕ್ಷಣೆಗಾಗಿ ಕ್ಯಾಂಪಸ್‌ನಲ್ಲಿ ಮರ-ಗಿಡಗಳ ಕೊರತೆ ಇರುವ ಕಾಲೇಜುಗಳಿಗೆ ದಂಡ ವಿಧಿಸಲು ಇಂದೋರ್‌ ನ ದೇವಿ ಅಹಲ್ಯಾ ವಿಶ್ವವಿದ್ಯಾಲಯ ಗಂಭೀರ ಚಿಂತನೆಯಲ್ಲಿ ತೊಡಗಿದೆ.

ಈ ಬಗ್ಗೆ ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಸಚಿನ್ ಶರ್ಮಾ ಮಾಹಿತಿ ನೀಡಿದ್ದು, ‘ಮಧ್ಯಪ್ರದೇಶ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಯಾವಾಗಲೂ ಹಸಿರು ಕ್ಯಾಂಪಸ್‌ಗಳನ್ನು ಕಾಪಾಡಿಕೊಳ್ಳಲು ಒತ್ತು ನೀಡಿದೆ ಮತ್ತು ಮರ ನೆಡುವ ಬಗ್ಗೆ ನಿರಂತರ ನಿರ್ದೇಶನಗಳನ್ನು ನೀಡಿದೆ ಎಂದಿದ್ದಾರೆ.

Advertisement

ಇದನ್ನೂ ಓದಿ: ಭಾರತ ಮತ್ತು ಗ್ರೀಸ್ ನಡುವೆ ಮಹತ್ವದ ಒಪ್ಪಂದಗಳಿಗೆ ಸಹಿ

ಈ ನಿರ್ದೇಶನಗಳನ್ನು ಪರಿಣಾಮಕಾರಿಯಾಗಿ ಪಾಲಿಸಬೇಕೆಂದು ನಾವು ಬಯಸುತ್ತೇವೆ. ಆದ್ದರಿಂದ, ಸಂಸ್ಥೆಗಳ ಕ್ಯಾಂಪಸ್‌ಗಳಲ್ಲಿ ಸಾಕಷ್ಟು ಹಸಿರು ಇಲ್ಲದಿದ್ದರೆ ಅವುಗಳ ಮೇಲೆ ದಂಡ ವಿಧಿಸುವ ಪ್ರಸ್ತಾಪವನ್ನು ನಾವು ಪರಿಗಣಿಸುತ್ತಿದ್ದೇವೆ ಎಂದರು.

ಈ ಪ್ರಸ್ತಾವನೆಗಳನ್ನು ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿಯ ಮುಂದೆ ಮಂಡಿಸಲಾಗುವುದು ಮತ್ತು ಅನುಮೋದನೆಯ ನಂತರ ಜಾರಿಗೆ ತರಲಾಗುವುದು ಎಂದು ಶರ್ಮಾ ಹೇಳಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು